ಮಂಗಳೂರು, ಆ. 28 : ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ನಡೆದ 19ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಪ್ರಯುಕ್ತ ಆ. 27, ಬುಧವಾರ ತೆನೆ ಹಬ್ಬ. ಧಾರ್ಮಿಕ ಕಾರ್ಯಕ್ರಮ ನಡೆಯಿತು.
ಸಂಸದ ಬ್ರಿಜೇಶ್ ಚೌಟ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂಸ್ಕೃತಿ- ಸಂಸ್ಕಾರವನ್ನು ಯುವ ಜನಾಂಗಕ್ಕೆ ವರ್ಗಾಯಿಸಲು ಗಣೇಶೋತ್ಸವದಂತಹ ಹಬ್ಬಗಳು ಪೂರಕವಾಗಿವೆ ಎಂದರು.
ಲೆ.ಕ. ರಮಾನಾಥ ಶೆಟ್ಟಿ ಮತ್ತು ಕ್ಷಮಾ ರಮಾನಾಥ ಶೆಟ್ಟಿ ಧ್ವಜಾರೋಹಣಗೈದರು. ಡಾ. ಮಹಾಬಲ ರೈ ಮತ್ತು ಮಲ್ಲಿಕಾ ಎಂ ರೈ ತೆನೆ ವಿತರಿಸಿದರು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ, ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಕೋಡಿಯಾಲ್ಗುತ್ತು ಅಜಿತ್ ಕುಮಾರ್ ರೈ ಮಾಲಾಡಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪುತ್ತೂರು ಬಂಟರ ಸಂಘದ ತಾಲೂಕು ಸಮಿತಿಯ ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ, ಬಂಟ್ವಾಳ ತಾಲೂಕು ಬಂಟರ ಸಂಘದ ಸಂಚಾಲಕ ಎ. ರಾಮಣ್ಣ ರೈ, ಬಜಪೆ ಬಂಟರ ಸಂಘದ ಅಧ್ಯಕ್ಷ ಬಾಬು ಶೆಟ್ಟಿ, ಜಪ್ಪಿನಮೊಗರು ಬಂಟರ ಸಂಘದ ಅಧ್ಯಕ್ಷ ಜೆ. ಸತ್ಯಪ್ರಸಾದ್ ಶೆಟ್ಟಿ, ಕುಳವಾರು – ಕೆಲೆಂಜಾರು ಬಂಟರ ಸಂಘದ ಅಧ್ಯಕ್ಷ ಶ್ರೀನಿವಾಸ ಶೆಟ್ಟಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಾಪು ಶ್ರೀ ಮಾರಿಯಮ್ಮ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ವಾಸುದೇವ ಶೆಟ್ಟಿ ಅವರನ್ನು ಸನ್ಮಾನಿಸ ಲಾಯಿತು. ಅಜಿತ್ ಕುಮಾರ್ ಮಾಲಾಡಿ ಸ್ವಾಗತಿಸಿದರು. ಸಂಚಾಲಕ ಅಶ್ವತ್ಥಾಮ ಹೆಗ್ಡೆ ಅಲ್ತಾರು ವಂದಿಸಿದರು. ಭಾಗ್ಯರಾಜ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಸಂಜೆ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರು ಮಾತನಾಡಿ, ಹಿರಿಯರು ಹಾಕಿಕೊಟ್ಟ ಮಾರ್ಗದರ್ಶನ ಸಮಾಜಕ್ಕೆ, ದೇಶಕ್ಕೆ ಪೂರಕವಾಗಲಿ ನಾವೆಲ್ಲರೂ ಸೌಹಾರ್ದತೆಯಿಂದ ಬಾಳಬೇಕು. ಏನೇ ಭಿನ್ನಾಭಿಪ್ರಾಯ ಇದ್ದರೂ ಹಿರಿಯರೊಂದಿಗೆ ಚರ್ಚಿಸಿ ಪರಸ್ಪರ ಪ್ರೀತಿ ವಿಶ್ವಾಸದೊಂದಿಗೆ ಮುಂದಡಿ ಇಡೋಣ ಎಂದರು.
ಮಂಗಳೂರು ವಿವಿಯ ಉಪಕುಲಪತಿ ಪ್ರೊ.ಪಿ.ಎಲ್.ಧರ್ಮ ಮಾತನಾಡಿ, ಎಲ್ಲರಿಗೂ ಮಾದರಿಯಾಗಿ ಗಣೇಶೋತ್ಸವ ಸಂಘಟಿಸುತ್ತಿರುವ ಬಂಟ ಸಮಾಜದ ಕಾರ್ಯ ಶ್ಲಾಘನೀಯ ಎಂದರು.
ಈ ಸಂದರ್ಭ ಸಾಹಿತಿ ಪಾಂಗಾಳ ಬಾಬು ಕೊರಗರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ಆಳ್ವಾಸ್ ಶಿಕ್ಷಣ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ, ಯೂನಿಯನ್ ಬ್ಯಾಂಕಿನ ಪ್ರಾದೇಶಿಕ ಮುಖ್ಯಸ್ಥ ರಾಜೇಂದ್ರ ಕುಮಾರ್, ಕರ್ನಾಟಕ ಥಿಯೋಸಾಫಿಕಲ್ ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಎಂ.ವಾಟ್ಸನ್, ಉರ್ವ ಮಾರಿಯಮ್ಮದೇವಸ್ಥಾನದ ಆಡಳಿತ ಮೊಕ್ತಸರ ಲಕ್ಷ್ಮಣ್ ಅಮೀನ್, ವಿವಿಧ ಸಂಘಗಳ ಅಧ್ಯಕ್ಷರುಗಳಾದ ರವೀಂದ್ರ ರೈ, ವಸಂತ ಶೆಟ್ಟಿ, ರಾಮಚಂದ್ರ ಕಾವ, ತಿಮ್ಮಯ್ಯ ಶೆಟ್ಟಿ, ಟ್ರಸ್ಟಿ ನಿಟ್ಟೆಗುತ್ತು ರವಿರಾಜ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.