ಬೆಂಗಳೂರು, ಆ. 31 : ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ(ಡಿಜಿ-ಐಜಿಪಿ) ಹಿರಿಯ ಐಪಿಎಸ್ ಅಧಿಕಾರಿ ಡಾ.ಎಂ.ಎ.ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಅಲೋಕ್ ಮೋಹನ್ ಅವರ ನಿವೃತ್ತಿಯ ನಂತರ ಮೇ 21 ರಿಂದ ಪ್ರಭಾರಿ ಡಿಜಿಪಿಯ ಹೆಚ್ಚುವರಿ ಜವಾಬ್ದಾರಿಯನ್ನು ಹೊಂದಿದ್ದ ಡಾ. ಸಲೀಂ ಅವರನ್ನು ಆಗಸ್ಟ್ 30 ರ ಶನಿವಾರ ಅಧಿಕೃತ ಅಧಿಸೂಚನೆಯೊಂದಿಗೆ ಆ ಹುದ್ದೆಗೆ ದೃಢಪಡಿಸಲಾಗಿದೆ.