ಮಂಗಳೂರು, ಸೆ. 07 : ಧರ್ಮಸ್ಥಳ ಪ್ರದೇಶದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದ ದೂರುದಾರ ಸಿಎನ್ ಚಿನ್ನಯ್ಯ ಅಲಿಯಾಸ್ ಚೆನ್ನನ ಎಸ್ಐಟಿ ಕಸ್ಟಡಿ ಅಂತ್ಯವಾಗಿದ್ದು, 14 ದಿನ ನ್ಯಾಯಾಂಗ ಬಂಧನ ವಿಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ.
ಎಸ್ಐಟಿ ಪೊಲೀಸರು ಭದ್ರತೆ ದೃಷ್ಟಿಯಿಂದ ಚಿನ್ನಯ್ಯನನ್ನು ಶಿವಮೊಗ್ಗ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಿದ್ದಾರೆ. ನ್ಯಾಯಾಂಗ ಬಂಧನಕ್ಕೊಳಗಾಗುತ್ತಿದ್ದಂತೆ ಇತ್ತ ಉಚಿತ ಕಾನೂನು ಸೇವೆಗಳ ಪ್ರಾಧಿಕಾರ ನೇಮಿಸಿದ್ದ ಚಿನ್ನಯ್ಯ ಪರ ವಕೀಲರಿಂದ ಜಾಮೀನು ಕೋರಿ ಬೆಳ್ತಂಗಡಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಸೆಪ್ಟೆಂಬರ್ 9ಕ್ಕೆ ಮುಂದೂಡಿದೆ.