ಮಂಗಳೂರು, ಸೆ. 11 : ಕಲ್ಲೂರ ಪ್ರತಿಷ್ಠಾನದ ವತಿಯಿಂದ 43ನೇ ವರ್ಷದ ರಾಷ್ಟ್ರೀಯ ಮಕ್ಕಳ ಉತ್ಸವ ಶ್ರೀ ಕೃಷ್ಣ ವೇಷ ಸ್ಪರ್ಧೆ ಕದ್ರಿ ಮಂಜುನಾಥ ದೇವಸ್ಥಾನದ ಪ್ರಾಂಗಣದಲ್ಲಿ ಸೆ. 14ರಂದು ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ಸೆ. 14ರಂದು ಬೆಳಗ್ಗೆ 9ರಿಂದ ಶ್ರೀಕೃಷ್ಣ ವರ್ಣ ವೈಭವ, ಮಧ್ಯಾಹ್ನ 12ರಿಂದ ಸಾಂಸ್ಕೃತಿಕ ಕಾರ್ಯಕ್ರಮ, 1 ಗಂಟೆಗೆ ಶ್ರೀ ಕೃಷ್ಣ ಜನ್ಮ ಮಹೋತ್ಸವ ನಂದ ಗೋಕುಲ ವೇದಿಕೆಯಲ್ಲಿ ಕೃಷ್ಣ ವೇಷ ಸ್ಪರ್ಧೆ ಉದ್ಘಾಟನೆಗೊಳ್ಳಲಿದೆ. ರಾತ್ರಿ 12ರ ತನಕ ಒಟ್ಟು 43 ವಿಭಾಗಗಳಲ್ಲಿ 9 ವೇದಿಕೆಗಳಲ್ಲಿ ಏಕಕಾಲದಲ್ಲಿ ಸ್ಪರ್ಧೆ ನಡೆಯಲಿದೆ. ರಾತ್ರಿ 12 ಗಂಟೆಗೆ ಅರ್ಘ್ಯ್ ಪ್ರದಾನ – ಪ್ರಸಾದ ವಿತರಣೆಯೊಂದಿಗೆ ಸಂಪನ್ನಗೊಳ್ಳಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಡಾ| ಎಂ. ಪ್ರಭಾಕರ ಜೋಶಿ, ಸಮೀರ್ ಪುರಾಣಿಕ್, ದಯಾನಂದ ಕಟೀಲ್, ಪ್ರಕಾಶ್ ನಾಯ್ಕ ಜಿ.ಕೆ. ಭಟ್ ಸೇರಾಜೆ, ಜಾನ್‌ಚಂದ್ರನ್, ಕದ್ರಿ ನವನೀತ್ ಶೆಟ್ಟಿ ಸುಧಾಕರ ರಾವ್ ಪೇಜಾವರ, ಪೂರ್ಣಿಮಾ ರಾವ್ ಪೇಜಾವರ, ಮಂಜುಳಾ ಶೆಟ್ಟಿ, ವಿಜಯಲಕ್ಷ್ಮಿ ಶೆಟ್ಟಿ, ಶ್ರೇಯಾ ಉಪಸ್ಥಿತರಿದ್ದರು.