ಮಂಗಳೂರು, ಸೆ. 16 : ಕಲ್ಲೂರ ಪ್ರತಿಷ್ಠಾನದ ವತಿಯಿಂದ ಶ್ರೀ ಕ್ಷೇತ್ರ ಕದ್ರಿ ದೇವಸ್ಥಾನದ ಪ್ರಾಂಗಣದಲ್ಲಿ 43ನೇ ವರ್ಷದ ಮಕ್ಕಳ ಉತ್ಸವ, ಶ್ರೀ ಕೃಷ್ಣವೇಷ ಸ್ಪರ್ಧೆ ಸೆ. 14,ಭಾನುವಾರ ನಡೆಯಿತು.

ಕಾರ್ಯಕ್ರಮವನ್ನು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರು ಉದ್ಘಾಟಿಸಿ, ಆಶೀರ್ವಚನದಲ್ಲಿ ಕಲ್ಕೂರ ಪ್ರತಿಷ್ಠಾನವು ಕಳೆದ 43 ವರ್ಷಗಳಿಂದ ಶ್ರೀ ಕೃಷ್ಣವೇಷ ಸ್ಪರ್ಧೆಯನ್ನು ಆಯೋಜಿಸುತ್ತಾ ಬಂದಿದೆ.. ಶ್ರೀ ರಾಮ, ಕೃಷ್ಣನ ಆದರ್ಶಗಳನ್ನು ಪಾಲಿಸುವ ಮೂಲಕ ಸಮಾಜದ ಶ್ರೇಯೋಭಿವೃದ್ಧಿಗೆ ಮುಂದಾಗಬೇಕು. ಮುಂದಿನ ವರ್ಷದಿಂದ ಕಲ್ಕೂರ ಪ್ರತಿಷ್ಠಾನ ಆಯೋಜಿಸುವ ಸ್ಪರ್ಧೆಯಲ್ಲಿ ಶ್ರೀ ಕೃಷ್ಣನ ಹೆಸರಿನ ಮಕ್ಕಳಿಗೆ ಬಹುಮಾನ ನೀಡಬೇಕು ಎಂದು ಸ್ವಾಮೀಜಿ ಹೇಳಿದರು.

ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕಲ್ಕೂರ ಮಾತನಾಡಿದರು. ಕಾರ್ಯಕ್ರಮದಲ್ಲಿಕದ್ರಿ ಮಂಜುನಾಥ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಎ.ಜೆ.ಶೆಟ್ಟಿ, ಕಟೀಲು ಲಕ್ಷ್ಮೀನಾರಾಯಣ ಅಸ್ರಣ್ಣ, ಶರವು ಮಹಾಗಣಪತಿ ದೇವಸ್ಥಾನದ ಧರ್ಮದರ್ಶಿ ರಾಘವೇಂದ್ರ ಶಾಸ್ತ್ರೀ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಶಾಸಕ ವೇದವ್ಯಾಸ ಕಾಮತ್, ಕಾಂಗ್ರೆಸ್ ಮುಖಂಡ ಶಶಿಧರ ಹೆಗ್ಡೆ, ಉದ್ಯಮಿ ರತ್ನಾಕರ ಜೈನ್m ಲೀಲಾಕ್ಷ ಕರ್ಕೇರ, ಸುಧಾಕರ ರಾವ್ ಪೇಜಾವರ ಉಪಸ್ಥಿತರಿದ್ದರು. ನವನೀತ್ ಶೆಟ್ಟಿ ಕದ್ರಿ ನಿರೂಪಿಸಿದರು.

ಕಂದ ಕೃಷ್ಣ, ಮುದ್ದು ಕೃಷ್ಣ ಕಿಶೋರ ಕೃಷ್ಣ ರಾಧಾ ಕೃಷ್ಣ ಶ್ರೀಕೃಷ್ಣ ಗೀತಾ ಕೃಷ್ಣ ಯಶೋದಾ ಕೃಷ್ಣ ವಸುದೇವ ಕೃಷ್ಣ ದೇವಕಿ ಕೃಷ್ಣ ನಂದಗೋಕುಲ, ಶ್ರೀಕೃಷ್ಣ ವರ್ಣ ವೈಭವ, ಛಾಯಾ ಕೃಷ್ಣ ಕದ್ರಿ ದೇವಸ್ಥಾನದಲ್ಲಿ ಕಲ್ಕೂರ ಪ್ರತಿಷ್ಠಾನ ಆಯೋಜಿಸಿದ್ದ ಕೃಷ್ಣ ವೇಷ ಸ್ಪರ್ಧೆಯ ತೊಟ್ಟಿಲು ಕೃಷ್ಣ ವಿಭಾಗದಲ್ಲಿ ಭಾಗವಹಿಸಿದರಿಗೆ ಪೇಜಾವರಶ್ರೀ ಸ್ಮರಣಿಕೆ ನೀಡಿದರು. ಬೆಳಗ್ಗಿನಿಂದ ರಾತ್ರಿವರೆಗೆ ಒಟ್ಟು 43 ವಿಭಾಗಗಳಲ್ಲಿ, 12 ವೇದಿಕೆಗಳಲ್ಲಿ ಏಕ ಕಾಲದಲ್ಲಿ ಸ್ಪರ್ಧೆ ಆಯೋಜಿಸಲಾಗಿತ್ತು. ಜತೆಗೆ ವಿವಿಧ ಸಾಹಿತ್ಯಿಕ- ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆದವು. ರಾತ್ರಿ 12ಕ್ಕೆ ಅರ್ಘ್ಯ ಪ್ರದಾನ- ಪ್ರಸಾದ ವಿತರಣೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.











