ಮಂಗಳೂರು, ಸೆ.22 : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸೆ.22ರಿಂದ ಅಕ್ಟೋಬರ್ 3ರವರೆಗೆ ಮಂಗಳೂರು ದಸರಾ ನವರಾಯತ್ರಿ ಉತ್ಸವ ಜರುಗಲಿದೆ ಎಂದು ಶ್ರೀ ಕ್ಷೇತ್ರದ ಆಡಳಿತ ಮಂಡಳಿಯ ಕೋಶಾಧಿಕಾರಿಯಾದ ಪದ್ಮರಾಜ್ ಆರ್ ಅವರು ಶನಿವಾರ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತಾಡಿದ ಅವರು, ಸೆ.22ರಂದು ಬೆಳಗ್ಗೆ 8.30ಕ್ಕೆ ಗುರು ಪ್ರಾರ್ಥಯೊಂದಿಗೆ ಪುಣ್ಯಾಹ ಹೋಮ ನವಕಲಶಾಭಿಷೇಕ ನಡೆದು ಪೂರ್ವಾಹ್ನ 12ಗಂಟೆಗೆ ನವದುರ್ಗೆಯರು, ಮಹಾಗಣಪತಿ ಹಾಗೂ ಶ್ರೀ ಶಾರದಾ ಮಾತೆಯ ಪ್ರತಿಷ್ಠಾಪನೆ ಯೊಂದಿಗೆ ಪ್ರಾರಂಭಗೊಂಡು ಅಕ್ಟೋಬರ್ 3ರ ತನಕ ಕೇಂದ್ರದ ಮಾಜಿ ಸಚಿವರು, ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ.ಜನಾರ್ದನ ಪೂಜಾರಿಯವರ ಮಾರ್ಗದರ್ಶನದಲ್ಲಿ ಮಂಗಳೂರು ದಸರಾ (ನವರಾತ್ರಿ ಮಹೋತ್ಸವ) ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ವಿಜೃಂಬಣೆಯಿಂದ ಜರುಗಲಿದೆ ಎಂದು ಹೇಳಿದರು.
ಸೆ.22ರಂದು ಬೆಳಗ್ಗೆ 11.30ಕ್ಕೆ ಧಾರ್ಮಿಕ ಕಾರ್ಯಕ್ರಮಗಳು ಮಂಗಳೂರು ರಾಮಕೃಷ್ಣ ಮಿಶನ್ ನ ಅಧ್ಯಕ್ಷರಾದ ಜಿತಕಾಮಾನಂದಜಿ ಮಹಾರಾಜ್, ಮಂಗಳೂರು ಬ್ರಹ್ಮಕುಮಾರೀಸ್ ಸಂಸ್ಥೆ ಮುಖ್ಯಸ್ಥೆ ಬಹ್ಮಕುಮಾರಿ ವಿಶ್ವೇಶ್ವರಿ ಜೀ ಅವರ ಹಸ್ತದಿಂದ ಬಿ.ಜನಾರ್ದನ ಪೂಜಾರಿಯವರ ಸಮ್ಮುಖದಲ್ಲಿ ಚಾಲನೆಗೊಳ್ಳಲಿದೆ., ಸೆ.21ರಂದು ಸಂಜೆ ಕೇತ್ರದ ನವ ನಿರ್ಮಾಣದ ರೂವಾರಿ. ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಯವರು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಸೆ.22ರಂದು ಸಾಂಸ್ಕೃತಿಕ ಕಾರ್ಯಕ್ರಮವನ್ನು ಎನ್‌ಎಂಪಿಎ ಚೇರ್ಮನ್ ಡಾ.ವೆಂಕಟರಮಣ್ ಅಕ್ಕರಾಜು, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಂಗಳೂರು ವಲಯ ಮುಖ್ಯಸ್ಥ ರಾಜೇಂದರ್ ಕುಮಾರ್ ಉದ್ಘಾಟಿಸಲಿದ್ದಾರೆ.ಸಮಾಜಮುಖಿ ಸೇವೆ ಸಲ್ಲಿಸುತ್ತಿರುವ ಸಾನಿಧ್ಯ ವಿಶೇಷ ಶಾಲೆ, ವೈಟ್‌ಡೌಸ್ , ಎಂ ಫ್ರೆಂಡ್ಸ್ ಚಾರಿಟೆಬಲ್ ಟ್ರಸ್ಟ್, ಭರತನಾಟ್ಯದಲ್ಲಿ ಗೊಲ್ಡನ್ ಬುಕ್ ಆಫ್ ವರ್ಲ್ಡ್. ರೆಕಾರ್ಡ್ ಸಾದನೆಗೈದ ರೆಮೋನಾ, ದೀಕ್ಷಾ ಸುವರ್ಣ ಅವರನ್ನು ಗೌರವಿಸಲಾ ಗುವುದು ಎಂದರು.
ಸೆ.25ರಂದು ಸಂಜೆ 6ಗಂಟೆಗೆ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಲೋಕಸಭೆ ಸದಸ್ಯ ಬ್ರಿಜೇಶ್ ಚೌಟ, ಎಐಸಿಸಿಯ ಕೆ.ಸಿ.ವೇಣುಗೋಪಾಲ್, ಜಿಲ್ಲಾ ಉಸ್ತುವಾರಿ ಸಚಿವರು ದಿನೇಶ್ ಗುಂಡೂರಾವ್ ಹಾಗೂ ಜನಪ್ರತಿ ನಿಧಿಗಳು, ಗಣ್ಯರ ಉಪಸ್ಥಿತಿಯಲ್ಲಿ ಮಾನ್ಯ ಜನಾರ್ದನ ಪೂಜಾರಿಯವರ ಅಧ್ಯಕ್ಷತೆಯಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ಸಿಗಲಿದೆ. ಸೆ.28ರಂದು ಬೆಳಗ್ಗೆ 9ಕ್ಕೆ ವಿಶ್ವ ಬಿಲ್ಲವ ಮಹಿಳಾ ಸಂಘದ ನೇತೃತ್ವದಲ್ಲಿ ಸಾಮೂಹಿಕ ಚಂಡಿಕಾ ಹೋಮ ನಡೆಯಲಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿ ಪಡೆದಿರುವ ಮಂಗಳೂರು ದಸರಾದ ಸಾಂಸ್ಕೃತಿಕ ವೇದಿಕೆಯಲ್ಲಿ ಕಲಾಪ್ರದರ್ಶನ ನೀಡಲಿದ್ದಾರೆ. 40 ತಂಡಗಳ ಸುಮಾರು 500ಕ್ಕೂ ಅಧಿಕ ಕಲಾವಿದರಿಗೆ ಕಲಾ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬೇರೆ ಬೇರೆ ಕಲಾಸಕ್ತ ಮನಸ್ಸುಗಳಿಗಾಗಿ ಭರತನಾಟ್ಯ, ಜಾನಪದ ಸಂಭ್ರಮ, ಭಕ್ತಿ ಪ್ರಧಾನ ಚೈತ್ಯ ರೂಪಕ, ಯಕ್ಷಗಾನ ಗಾನ ನಾಟ್ಯ ವೈಭವ, ತಾಳಮದ್ದಳೆ, ಹರಿಕಥೆ, ಸಂಗೀತ ಪರಿಕರಗಳ ಜುಗಲ್‌ಬಂಧಿ, ಸಪ್ತ ವೀಣಾವಾದನ ಹಾದೂ ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು.
ಸೆ.23ರಂದು ಸಂಜೆ 4ರಿಂದ ಅರವರೆಗೆ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಮಂಗಳೂರು ಸಹಯೋಗದದಲ್ಲಿ ಬಹುಭಾಷಾ ಕವಿಗೋಷ್ಠಿ ಆಯೋಜಿಸಲಾಗಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮುದ್ದು ಶಾರದೆ ಸ್ಪರ್ಧೆ:-ಸೆ.24ರಂದು ಮಕ್ಕಳಿಗಾಗಿ ಮೂರು ವಿಭಾಗದಲ್ಲಿ ಮುದ್ದು ಶಾರದೆ ಮತ್ತು ನವದುರ್ಗೆಯರ ಸ್ಪರ್ಧೆ ಬೆಳಗ್ಗೆ 9ರಿಂದ ಸಂಜೆಯವರೆಗೆ ನಡೆಯಲಿದೆ. 26ರಂದು ಯುವಕರಿಗೂ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಮಿಸ್ಟರ್ ಮಂಗಳೂರು ದಸರಾ ಕ್ಲಾಸಿಕ್ ‘ರಾಜ್ಯ ಮಟ್ಟದ ದೇಹಧ್ಯಾತ್ಮ ಸ್ಪರ್ಧೆ, ಆಯೋಜಿಸ ಲಾಗಿದೆ.ದಸರಾ ಮ್ಯಾರಾಥನ್ ಆಯೋಜಿಸಲಾಗಿದೆ. ಸೆ.28ರಂದು,ಬೆ.9.30ಕ್ಕೆ ‘ಮಕ್ಕಳ ದಸರಾ’ ಪರಿಕಲ್ಪನೆಯಡಿ ಮಕ್ಕಳಿಗೋಸ್ಕರ ಕಿನ್ನಿಪಿಲಿ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಸಂಗೀತ ಸ್ಪರ್ಧೆಯನ್ನು ಆಕರ್ಷಕ ಬಹುಮಾನ ದೊಂದಿಗೆ ಆಯೋಜಿಸಲಾಗಿದೆ ಎಂದರು.
ಸೆ. 22ರಿಂದ ಅ. 2ರ ವರೆಗೆ ನಡೆಯುವ ದಸರಾದಲ್ಲಿ ಪ್ರತಿದಿನ ಒಬ್ಬರಿಗೆ ಸಂಜೆ 7.30ಕ್ಕೆ 9 ಸಾಧಕಿಯರಿಗೆ ಅಸಾಮಾನ್ಯ ಸ್ತ್ರಿ ಪುರಸ್ಕಾರ -2025ರನ್ನು ನೀಡಿ ಗೌರವಿಸಲಾಗುವುದು ವನವಾ ಪೂಜಾರಿ (ಸಾಮಾಜಿಕ-ಮೋಕ್ಷಧಾನು), ವೆಂಕಮ್ಮ ಕುಡಂಬೆಟ್ಟು (ಪ್ರಸೂತಿ ತಜ್ಞೆ), ಶಾಲೆಟ್ (ಸಾಮಾಜಿಕ- ಮೂಕಪ್ರಾಣಿಗಳ ಆರೈಕೆ), ಸುಶೀಲಾ ಪಾಣಾರ (ಪಾರ್ದನ), ಯೋಗಾಕ್ಷಿ ಗಣೇಶ್ (ತೆಂಕುತಿಟ್ಟು ಮಹಿಳಾ ಯಕ್ಷಗಾನ ಮೇಳದ ಸಂಚಾಲಕಿ), ಜಾನಕಿ ಕೊಡ್ಯಡ್ಕ (ನಾಟಿ ವೈದ್ಯ) ತಬಸ್ಸುಮ್ (ಸಾಮಾಜಿಕ-ಅನಾಥ ಎಚ್.ಐ.ವಿ ಪೀಡಿತ ಮಕ್ಕಳ ಆರೈಕೆ), ಬಿ.ಎಂ.ರೋಹಿಣಿ ಕನ್ನಡ ಮತ್ತು ತುಳು ಸಾಹಿತ್ಯ ಕ್ಷೇತ್ರ), ರೋಹಿಣಿ ಜಗರಾಮ್ (ತುಳು ರಂಗಭೂಮಿ ಮತ್ತು ಚಲನಚಿತ್ರ ರಂಗ) ಇವರ ಅಪ್ರತಿಮ ಸಾಧನೆ ಗುರುತಿಸಿ ಅಸಾಮಾನ್ಯ ಶ್ರೀ ಪುರಸ್ಕಾರ ಪ್ರದಾನ ನೆರವೇರಲಿದೆ ಎಂದು ತಿಳಿಸಿದರು.
ನವರಾತ್ರಿ ಪ್ರಯುಕ್ತ ಪ್ರತಿದಿನವೂ ಬೆಳಗ್ಗೆಯಿಂದ ರಾತ್ರಿವರೆಗೂ ವಿವಿಧ ಧಾರ್ಮಿಕ ಅನುಷ್ಠಾನ ಭಜನಾ ಕಾರ್ಯಕ್ರಮಗಳು ನೆರವೇರಲಿದೆ. ಸೆ.22ರಂದು ಮಹಾನವಮಿ, 23ರಂದು ದುರ್ಗಾ ಹೋಮ, 24ರಂದು ಪಂಚದುರ್ಗಾ ಹೋಮ, 25ರಂದು ಆರ್ಯದುರ್ಗಾ ಹೋಮ, 26ರಂದು ಅಂಬಿಕಾದುರ್ಗಾ ಹೋಮ, 27 ಭಗವತಿ ದುರ್ಗಾ ಹೋಮಾ, 28 ರಂದು ಸಾಮೂಹಿಕ ಚಂಡಿಕಾ ಹೋಮ, 29 ರಂದು ಮಹಿಷಮರ್ದಿನಿ ದುರ್ಗಾ ಹೋಮ, 30ರಂದು ಚಂಡಿಕಾ ಹೋಮ, ಹಗಲೋತ್ಸವ, ಅ 1ರಂದು ಸರಸ್ವತಿ ಹೋಮ, ಶತ ಸೀಯಾಳಭಿಷೇಕ, ಶಿವಪೂಜೆ (ಮಹಾನವಮಿ), ಆ2ರಂದು ವಾಗೀಶ್ವರಿ ದುರ್ಗಾ. ಶಿವಪೂಜೆ. 3ರಂದು ಪ್ರಾತಃಕಾಲ ಗಂಟೆ 4ರಿಂದ ಪೂಜೆ ಬಲಿ, ಮಂಟಪ ಬಲಿ, ಪ್ರಾತಃಕಾಲ ಮಂಟಪ ಪೂಜೆ ಬಳಿಕ ಶ್ರೀ ಶಾರದಾ ವಿಸರ್ಜನೆ, ಅವಧೃತಸ್ನಾನ. ರಾತ್ರಿ 9ರಿಂದ ಗುರುಪೂಜೆ ನೆರವೇರಲಿದೆ ಎಂದರು..
ಅ. 2ರಂದು ಶ್ರೀ ಬಿ.ಜನಾರ್ದನ ಪೂಜಾರಿಯವರ ನೇತೃತ್ವದದಲ್ಲಿ ಸಂಜೆ 4ರಿಂದ ನವದುರ್ಗೆಯರು, ಗಣಪತಿ ಮತ್ತು ಶಾರದಾ ಮಾತೆಯ ಭವ್ಯ ಶೋಭಾಯಾತ್ರೆ ನಡೆಯಲಿದೆ. ಶೋಭಾಯಾತ್ರೆಯು ಕ್ಷೇತ್ರದಿಂದ ಹೊರಟು ಕಂಬ್ಲ ರಸ್ತೆ ಮಾರ್ಗವಾಗಿ ನಗರ ಪ್ರದಕ್ಷಿಣೆಯ ಬಳಿಕ ಕಾರ್ ಸ್ಟ್ರೀಟ್, ಚಿತ್ರಾ ಬಾರ್ಕಿಸ್ ಅಳಕೆಯಾಗಿ ಮತ್ತೆ ಶ್ರೀಕ್ಷೇತ್ರಕ್ಕೆ ಬರಲಿದ್ದು, ನಂತರ ವಿಸರ್ಜನೆಗೊಳ್ಳಲಿದೆ ಎಂದು ಅವರು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಾಡಳಿತ ಮಂಡಳಿಯ ಅದ್ಯಕ್ಷರಾದ ಜೈರಾಜ್ ಸೋಮರಾಜ್, ಉಪಾದ್ಯಕ್ಷರಾದ ಉರ್ಮಿಳಾ ರಮೇಶ್,ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದೇವೇಂದ್ರ ಪೂಜಾರಿ, ಉಪಾಧ್ಯಕ್ಷ ಡಾ.ಬಿ.ಜಿ.ಸುವರ್ಣ, ಸದಸ್ಯ ರಾದ ಜಗದೀಪ್ ಸುವರ್ಣ, ಕೃತಿನ್ ಅಮಿನ್, ಮಾಜಿ ಶಾಸಕ ಹರೀಶ್ ಕುಮಾರ್ ಬೆಳ್ತಂಗಡಿ,ರಾದಕೃಷ್ಣ ಹರಿಕೃಷ್ಣ ಬಂಟ್ವಾಳ ಜಗದೀಪ್ ಸುವರ್ಣ, , ಶೈಲೇಂದ್ರ ಸುವರ್ಣ, ಕೃತಿನ್ ಅಮಿನ್, ಲತೇಶ್ ಕೋಟ್ಯಾನ್, ಹರೀಶ್ ಸುವರ್ಣ, ರಾಧ ಕೃಷ್ಣ ಮೊದಲಾದವರು ಉಪಸ್ಥಿತರಿದ್ದರು.











