ಬೆಂಗಳೂರು, ಸೆ. 24 : ಪದ್ಮಭೂಷಣ, ಹಿರಿಯ ಸಾಹಿತಿ ಎಸ್‌ಎಲ್ ಭೈರಪ್ಪ ಅವರು ಹೃದಯಾಘಾತದಿಂದ ಸೆ. 24, ಬುಧವಾರ ರಾಗಿದ್ದಾರೆ.
ಸಾಹಿತಿ ಎಸ್‌ಎಲ್ ಭೈರಪ್ಪ ಅವರಿಗೆ 94 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ತಿಂಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್.ಎಲ್. ಭೈರಪ್ಪ ಅವರು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ರಾಷ್ಟೋತ್ಸಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ರಾಷ್ಟೋತ್ಯಾನ ಆಸ್ಪತ್ರೆ ಕೂಡ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದೆ.
ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲಿಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಹಲವಾರು ಕಾದಂಬರಿಗಳು ಮರುಮುದ್ರಣಗಳನ್ನು ಕಂಡಿವೆ. ಇವರಿಗೆ ಭಾರತ ಸರ್ಕಾರವು 2023ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.