ಮಂಗಳೂರು, ಅ.03 : :ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸೆ.22ರಂದು ನವರಾತ್ರಿಯ ಮಂಗಳೂರು ದಸರಾ ಆರಂಭಗೊಂಡಿದ್ದು, ಸೆ.2, ಗುರುವಾರ 4 ಗಂಟೆಗೆ ಕುದ್ರೋಳಿ ಶ್ರೀ ಕ್ಷೇತ್ರದಲ್ಲಿ ಶೋಭಾಯಾತ್ರೆಗೆ ಚಾಲನೆ ದೊರೆಯಿತು.
ಶೋಭಾಯಾತ್ರೆಗೆ ಕೇಂದ್ರದ ಮಾಜಿ ವಿತ್ತ ಸಚಿವ ಕುದ್ರೋಳಿ ಶ್ರೀ ಕ್ಷೇತ್ರದ ನವೀಕರಣದ ರೂವಾರಿ ಬಿ.ಜನಾರ್ದನ ಪೂಜಾರಿಯವರ ಅವರ ಮಾರ್ಗದರ್ಶನದಲ್ಲಿ ಮೆರವಣಿಗೆಗೆ ಚಾಲನೆ ನೀಡಲಾಗಿದ್ದು, ಶೋಭಾಯಾತ್ರೆಯು ಕ್ಷೇತ್ರದಿಂದ ಹೊರಟು ನಗರ ಪ್ರದಕ್ಷಿಣೆ ಯ ಬಳಿಕ ಚಿತ್ರಾ ಟಾಕೀಸ್ ಅಳಕೆಯಾಗಿ ಮತ್ತೆ ಶ್ರೀಕ್ಷೇತ್ರಕ್ಕೆ ಬಂದು ವಿಸರ್ಜನೆಗೊಂಡಿತು.
ಕುದ್ರೋಳಿ ಕ್ಷೇತ್ರದಲ್ಲಿ ಪೂಜೆಗೊಂಡ ಗಣಪತಿ, ಆದಿಶಕ್ತಿ, ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಾ, ಕೂಷ್ಮಾಂಡಿನಿ, ಸ್ಕಂದಮಾತಾ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ದಿಧಾತ್ರಿ ಮೂರ್ತಿಗಳು ನಗರದ ಬೀದಿಗಳಲ್ಲಿ ವಿದ್ಯುದ್ದೀಪಾಲಂಕೃತ ವಾಹನಗಳಲ್ಲಿ ಸಾಲಾಗಿ ಸಾಗಿತು. ವಿವಿಧ ಸ್ತಬ್ಧಚಿತ್ರಗಳು, ಹುಲಿವೇಷ ಕುಣಿತ ಟ್ರಕ್‌ಗಳು ಮೆರವಣಿಗೆಗೆ ಮೆರುಗು ತುಂಬಿದವು. ಇಂದು ಬೆಳಿಗ್ಗೆ 6.30ರ ಸುಮಾರಿಗೆ ಜಲಸ್ತಂಭನಗೊಳಿಸಲಾಯಿತು. ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಂದಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಶ್ರೀ ಕುದ್ರೋಳಿ ಕ್ಷೇತ್ರಾಡಳಿತ ಮಂಡಳಿಯ ಅದ್ಯಕ್ಷರಾದ ಜೈರಾಜ್ ಸೋಮರಾಜ್, ಉಪಾದ್ಯಕ್ಷರಾದ ಉರ್ಮಿಳಾ ರಮೇಶ್,ದೇವಸ್ಥಾನ ಅಭಿವೃದ್ಧಿ ಸಮಿತಿಯ ಅದ್ಯಕ್ಷ ದೇವೇಂದ್ರ ಪೂಜಾರಿ, ಉಪಾಧ್ಯಕ್ಷ ಡಾ.ಬಿ.ಜಿ.ಸುವರ್ಣ, ಶಾಸಕರಾದ ಐವನ್ ಡಿ ಸೋಜ , ಸದಸ್ಯರಾದ ಜಗದೀಪ್ ಸುವರ್ಣ, ಕೃತಿನ್ ಅಮಿನ್,ರಾದಕೃಷ್ಣ, ಹರಿಕೃಷ್ಣ ಬಂಟ್ವಾಳ ಮತ್ತಿತ್ತರರು ಹಾಜರಿದ್ದರು.