ಸುಳ್ಯ , ಅ. 14 : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಸುಳ್ಯ ತಾಲೂಕಿನ ಗುತ್ತಿಗಾರು ಶಾಖೆ ಗುತ್ತಿಗಾರು ಮುಖ್ಯ ರಸ್ತೆಯ ರಾಘವೇಂದ್ರ ಕಾಂಪ್ಲೆಕ್ಸ್ನ ಪ್ರಥಮ ಅಂತಸ್ತಿಗೆ ಸ್ಥಳಾಂತರಗೊಂಡಿದ್ದು, ಶಾಖೆಯ ಉದ್ಘಾಟನೆ ಹಾಗೂ ಎಟಿಎಂ ಉದ್ಘಾಟನೆ ಸೋಮವಾರ ನಡೆಯಿತು.ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಶಾಖೆಯನ್ನು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ರೈತರ ಪರವಾಗಿ ನಿಂತಿರುವ ಡಿಸಿಸಿ ಬ್ಯಾಂಕ್ ಹಲವು ಯೋಜನೆಗಳನ್ನು ರೂಪಿಸಿದೆ. ಹಲವು ಸಂಘ-ಸಂಸ್ಥೆಗಳನ್ನು ಸೇರಿಸಿಕೊಂಡು ಮಹಿಳಾ ಸ್ವಸಹಾಯ ಸಂಘಗಳನ್ನು ರಚಿಸಿ, ಮಹಿಳೆಯರ ಸಬಲೀಕರಣಕ್ಕೆ ಕೈಜೋಡಿಸಿರುವುದು ಶ್ಲಾಘನೀಯವಾದದ್ದು ಎಂದು ಹೇಳಿದರು.
ಎಸ್‌ಸಿಡಿಸಿಸಿ ಬ್ಯಾಂಕ್ನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ ರಿಬ್ಬನ್ ಕತ್ತರಿಸಿ ಶಾಖೆ ಉದ್ಘಾಟಿಸಿದರು. ನಿರ್ದೇಶಕ ಕುಶಾಲಪ್ಪ ಗೌಡ ಎಟಿಎಂ ಕೇಂದ್ರವನ್ನು ಉದ್ಘಾಟಿಸಿದರು. ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮಿತ್ರಾ ಮೂಕಮಲೆ ಠೇವಣಿಪತ್ರ ವಿತರಿಸಿದರು. ಗುತ್ತಿಗಾರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘದ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಅವರು ಭದ್ರತಾ ಕೋಶ ಉದ್ಘಾಟಿಸಿದರು. ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜಯಪ್ರಕಾಶ್ ಮೊಗ್ರ ಲಾಕರ್ ಗ್ರಾಹಕರಿಗೆ ಲಾಕರ್ ಕೀ ವಿತರಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಸ್.ಎನ್.ಮನ್ಮಥ ಹೊಸ ಸ್ವಸಹಾಯ ಸಂಘಗಳ ಉದ್ಘಾಟಿಸಿದರು. ಅತಿಥಿಗಳು ವಾಹನ ಸಾಲಪತ್ರ ವಿತರಿಸಿದರು.
ಕಾರ್ಯಕ್ರಮದಲ್ಲಿ ಶಾಖಾ ವ್ಯವಸ್ಥಾಪಕ ಕುಶಾಲಪ್ಪ ಗೌಡ ಯು., ಕಟ್ಟಡ ಮಾಲಕ ಅನಿಲ್ ಕುಮಾರ್, ಶಾಖೆಯ ಉದ್ಘಾಟನಾ ಮೇಲ್ವಿಚಾರಣಾ ಜವಬ್ದಾರಿ ವಹಿಸಿದ್ದ ಪುತ್ತೂರು ಶಾಖಾ ವ್ಯವಸ್ಥಾಪಕ ಹರೀಶ್ ಪಿ., ಬ್ಯಾಂಕಿನ ಸ್ವಸಹಾಯ ಸಂಘಗಳ ಮೇಲ್ವಿಚಾರಕ ರಂಜಿತ್ ಕುಮಾರ್ ಎ., ಬ್ಯಾಂಕ್ನ ವಲಯ ಮೇಲ್ವಿಚಾರಕರಾದ ಮನೋಜ್ ಎಮ್.ಸಿ., ಸುಬ್ರಹ್ಮಣ್ಯ ಭಟ್, ಆದರ್ಶ ಬಿ. ಅವರನ್ನು ಸಮ್ಮಾನಿಸಲಾಯಿತು. ರತನ್ ಕೆ.ಎಸ್., ಪ್ರದೀಪ್ ಕುಮಾರ್, ವಿನಯಕುಮಾರ್ ಪಿ., ನವೋದಯ ವಲಯದ ಶ್ರೀಧರ್ ಎಂ., ಹೇಮಂತ್, ದಾಮೋದರ್, ಗಂಗಾಧರ್, ಪ್ರಕಾಶ್, ಸವಿತಾ ಎಸ್.ಟಿ., ಚಂದ್ರಕಲಾ, ಅನಿತಾ, ದೇವಕಿ ಅವರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಬ್ಯಾಂಕ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ಪ್ರಮುಖರಾದ ಭರತ್ ಮುಂಡೋಡಿ, ಕೇಶವ ಭಟ್ ಮುಳಿಯ, ಪಿ.ಸಿ.ಜಯರಾಮ, ವೆಂಕಟ್ ದಂಬೆಕೋಡಿ, ಮತ್ತಿತರರು ಉಪಸ್ಥಿತರಿದ್ದರು.
ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೋಟ್ಟು ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಶಾಖಾ ವ್ಯವಸ್ಥಾಪಕ ಸಂತೋಷ್ ಕುಮಾರ್ ಎಂ. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.