ಬೆಂಗಳೂರು, ನ. 06 : ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದುಬೆಳಗ್ಗೆ 11 ಗಂಟೆ ಸುಮಾರಿಗೆ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.
ಕರಾವಳಿ ಮೂಲದ ಹರೀಶ್ ರಾಯ್ ಅವರು ಕನ್ನಡ ಚಿತ್ರರಂಗದಲ್ಲಿ ಖಳನಟರಾಗಿ ಹೊರಹೊಮ್ಮಿದ್ದರು. ‘ಓಂ’, ‘ಜೋಡಿ ಹಕ್ಕಿ’, ‘ತಾಯವ್ವ’, ‘ನಲ್ಲ’, ‘ಜಾಫರ್ ಅಲಿಯಾಸ್ ಮುರ್ಗಿ ಜಾಫರ್’, ‘ಭೂಗತ’, ‘ರಾಜ್ ಬಹದ್ದೂರ್’, ‘ಸಂಜು ವೆಡ್ಸ್ ಗೀತಾ’, ‘ಕೆಜಿಎಫ್ ಚಾಪ್ಟರ್ 1 ಮತ್ತು 2’ ಸೇರಿದಂತೆ ಅನೇಕ ಚಿತ್ರಗಳಲ್ಲಿ ಅಭಿನಯಿಸಿದ್ದರು.
ಹರೀಶ್ ರಾಯ್ ಅವರು ತಮಿಳು ಚಿತ್ರರಂಗದಲ್ಲಿಯೂ ಅಭಿನಯಿಸಿದ್ದರು. ಕೆಲವು ವರ್ಷಗಳ ಹಿಂದೆ ಒಂದು ಪ್ರಕರಣದ ಹಿನ್ನೆಲೆ ಜೈಲು ಪಾಲಾಗಿದ್ದ ಸಂದರ್ಭದಲ್ಲೂ, ತಮ್ಮ ಜೀವನದ ಕಷ್ಟದ ದಿನಗಳನ್ನು ಅವರು ಸ್ವತಃ ಸ್ಮರಿಸಿಕೊಂಡು ಭಾವುಕರಾಗಿದ್ದರು. ಅವರು ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.











