Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಉಡುಪಿ : ರಸ್ತೆಯ ಹೊಂಡಕ್ಕೆ ಬಿದ್ದು ಮರಕ್ಕೆ ಢಿಕ್ಕಿ ಹೊಡೆದ ಟಿಪ್ಪರ್: ಚಾಲಕ ಮೃತ್ಯು

    December 11, 2025

    ಉತ್ತರ ಜಪಾನ್‌ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ: 23 ಮಂದಿಗೆ ಗಾಯ

    December 10, 2025

    ಡಿ.13, 14: ಮಂಗಳೂರಿನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವ

    December 9, 2025

    Subscribe to Updates

    Get the latest creative news from FooBar about art, design and business.

    What's Hot

    ಉಡುಪಿ : ರಸ್ತೆಯ ಹೊಂಡಕ್ಕೆ ಬಿದ್ದು ಮರಕ್ಕೆ ಢಿಕ್ಕಿ ಹೊಡೆದ ಟಿಪ್ಪರ್: ಚಾಲಕ ಮೃತ್ಯು

    December 11, 2025

    ಉತ್ತರ ಜಪಾನ್‌ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ: 23 ಮಂದಿಗೆ ಗಾಯ

    December 10, 2025

    ಡಿ.13, 14: ಮಂಗಳೂರಿನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವ

    December 9, 2025
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಯ ನವೀಕೃತ ‘ವಿಶ್ವಸೌಧ’ ಕಟ್ಟಡ ಉದ್ಘಾಟನೆ
    Local News

    ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಯ ನವೀಕೃತ ‘ವಿಶ್ವಸೌಧ’ ಕಟ್ಟಡ ಉದ್ಘಾಟನೆ

    adminBy adminNovember 10, 2025
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ನ. 10 : ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್  ಸೊಸೈಟಿಯ ನವೀಕೃತ ‘ವಿಶ್ವಸೌಧ’ ಕಟ್ಟಡ ಉದ್ಘಾಟನೆ ಮತ್ತು ವಜ್ರಮಹೋತ್ಸವ ಸಮಾರೋಪ ಸಮಾರಂಭ ಭಾನುವಾರ ನಗರದ ಕೊಟ್ಟಾರ ಚೌಕಿ ಆಡಳಿತ ಕಚೇರಿ ಬಳಿ ನಡೆಯಿತು.

    ಎಸ್ ಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾದ  ರಾಜೇಂದ್ರ ಕುಮಾರ್ ಅವರು  ಸೊಸೈಟಿಯ ನವೀಕೃತ ವಿಶ್ವಸೌಧ ಕಟ್ಟಡವನ್ನು ಉದ್ಘಾಟಿಸಿದರು.ಬಳಿಕ ಮಾತಾಡಿದ ಅವರು, ರಾಷ್ಟ್ರೀಕೃತ ಬ್ಯಾಂಕುಗಳು ಜನರಿಗೆ ಸಾಲ ನೀಡಲು ಹಿಂಜರಿಯುತ್ತಿವೆ. ಆದರೆ ಸಹಕಾರಿ ಸಂಸ್ಥೆಗಳು ಜನರ ಮನೆ ಬಾಗಿಲಿಗೆ ಹೋಗಿ ಉತ್ತಮ ಸೇವೆ ನೀಡುತ್ತಿದೆ. ಹಾಗೆನೇ ಶುಭ ಕಾರ್ಯಗಳು ಸೇರಿದಂತೆ ಅಗತ್ಯ ಸಂದರ್ಭಗಳಲ್ಲಿ ತ್ವರಿತವಾಗಿ ಸಾಲ ನೀಡುತ್ತಾ ಬೆಳೆಯುತ್ತಿವೆ. ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ರಾಜ್ಯಾದ್ಯಂತ ಶಾಖೆಗಳನ್ನು ವಿಸ್ತರಿಸಿ ಇನ್ನಷ್ಟು ಜನರಿಗೆ ಉದ್ದಿಮೆ ಆರಂಭಿಸಲು ನೆರವಾಗಿ ರಾಷ್ಟ್ರಮಟ್ಟದಲ್ಲಿ ಗುರುತಿಸುವಂತಾಗಲಿ  ಎಂದರು.

    ಶ್ರೀಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ಆಶೀರ್ವಚನ ನೀಡಿ, ಪಾಲ್ಕೆ ಬಾಬುರಾಯ ಆಚಾರ್ಯರು 1964ರಲ್ಲಿ ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯನ್ನು ಆರಂಭಿಸಿ ಸಮಾಜದ ಜನರಿಗೆ ಆರ್ಥಿಕವಾಗಿ ಬಲ ತುಂಬಿದರು.  ಸೊಸೈಟಿಯು ಇಂದು  ಮಾದರಿಯಾಗಿ ಬೆಳವಣಿಗೆಯಾಗಿದೆ. ಉತ್ತಮ ವ್ಯವಹಾರದ ಜತೆಗೆ ಸಮಾಜಮುಖಿ ಕಾರ್ಯಗಳಿಂದಾಗಿ ಗುರುತಿಸಿಕೊಂಡಿದೆ. ಪ್ರಸ್ತುತ ಇರುವ 18 ಶಾಖೆಗಳು ಮುಂದೆ ಹೆಚ್ಚಾಗಲಿ ಎಂದು ಶುಭ ಹಾರೈಸಿದರು.

    ಅರಕಲಗೂಡು ಅರೆಮಾದನಹಳ್ಳಿ ವಿಶ್ವಬ್ರಾಹ್ಮಣ ಮಹಾಸಂಸ್ಥಾನ ಮಠ ಶ್ರೀ ವಿಶ್ವಕರ್ಮ ಜಗದ್ಗುರು ಪೀಠದ ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ ಅವರು ತಮ್ಮ ಆಶೀರ್ವಚನದಲ್ಲಿ, ಪಾಲ್ಕೆ ಬಾಬುರಾಯ ಆಚಾರ್ಯ ಅವರ ಸತ್ ಸಂಕಲ್ಪ ಸಹೃದಯತೆಯಿಂದಾಗಿ  ಸಮಾಜದ ಜನರಿಗೆ ಪ್ರಯೋಜನವಾಗಿದೆ ಎಂದು ಹೇಳಿದರು.

    ಪಾಲ್ಕೆ ಬಾಬುರಾಯ ಆಚಾರ್ಯ ಅವರ ಪುತ್ಥಳಿ ಅನಾವರಣ ಗೊಳಿಸಿದ ಅಯೋಧ್ಯಾ ಶ್ರೀ ರಾಮಲಲ್ಲಾ ವಿಗ್ರಹದ ನಿರ್ಮಾತೃ ಶಿಲ್ಪಿ ಡಾ. ಅರುಣ್ ಯೋಗಿರಾಜ್ ಮಾತನಾಡಿ, ನನ್ನ ಮೊದಲ ಕೆತ್ತನೆಗೆ ಮಾರ್ಬಲ್ ಖರೀದಿಸಲು ಸಹಕಾರಿ ಸಂಸ್ಥೆಯೇ ನೆರವಾಗಿತ್ತು. ಬ್ಯಾಂಕುಗಳಿಗಿಂತ ಸಹಕಾರಿ ಸಂಸ್ಥೆಗಳು ಜನರಿಗೆ ಉತ್ತಮವಾಗಿ ಸ್ಪಂದಿಸುತ್ತಿದೆ  ಎಂದರು.

    ಸಂಸದರಾದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಡಿ.ವೇದವ್ಯಾಸ ಕಾಮತ್, ಡಾ.ವೈ. ಭರತ್ ಶೆಟ್ಟಿ  ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಎಸ್.ಕೆ ಗೋಲ್ಡ್ ಸ್ಮಿತ್ಸ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ, ಸಹಾಯಧನವನ್ನು ವಿತರಿಸಲಾಯಿತು.

    ಕಾರ್ಯಕ್ರಮದಲ್ಲಿ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಆಡಳಿತಾಧಿಕಾರಿ ಕೆ. ಉಮೇಶ್ ಆಚಾರ್ಯ, ಕೆನರಾ ಜ್ಯುವೆಲ್ಲರ್ಸ್ ನ ಧನಂಜಯ ಪಾಲ್ಕೆದ.ಕ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಮನಪಾ ಮಾಜಿ ಸದಸ್ಯ ಕಿರಣ್ ಕುಮಾರ್ ಕೋಡಿಕಲ್, ಸೊಸೈಟಿಯ ಆಡಳಿತ ಮಂಡಳಿಯ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

    ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ,ಉಪಾಧ್ಯಕ್ಷ ಎ.ಆನಂದ ಆಚಾರ್ಯ ವಂದಿಸಿದರು. ಎನ್.ಆರ್. ದಾಮೋದರ ಆಚಾರ್ಯ, ವಾರುಣಿ ನಾಗರಾಜ್ ಕಾರ್ಯಕ್ರಮವನ್ನು ನಿರ್ವಹಿಸಿದರು.

     

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News December 11, 2025

    ಉಡುಪಿ : ರಸ್ತೆಯ ಹೊಂಡಕ್ಕೆ ಬಿದ್ದು ಮರಕ್ಕೆ ಢಿಕ್ಕಿ ಹೊಡೆದ ಟಿಪ್ಪರ್: ಚಾಲಕ ಮೃತ್ಯು

    Local News December 9, 2025

    ಡಿ.13, 14: ಮಂಗಳೂರಿನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವ

    Local News December 7, 2025

    ಗೋವಾ : ನೈಟ್ ಕ್ಲಬ್‌ನಲ್ಲಿ ಬೆಂಕಿ ಅವಘಡ – 23 ಮಂದಿ ಸಜೀವ ದಹನ

    Local News December 6, 2025

    ಹಂಪನಕಟ್ಟೆ ಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರೂ. 5.50 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಕಂಪ್ಯೂಟ‌ರ್ ಪ್ರಯೋಗಾಲಯದ ಕೊಠಡಿ ಶಾಸಕ ಡಿ.ವೇದವ್ಯಾಸ ಕಾಮತ್ ಅವರಿಂದ ಉದ್ಘಾಟನೆ

    Local News December 6, 2025

    ಎಂ.ಸಿ.ಸಿ. ಬ್ಯಾಂಕಿನ ನವೀಕೃತ ಕಂಕನಾಡಿ ಶಾಖೆಯ ಉದ್ಘಾಟನೆ

    Local News December 4, 2025

    ಡಿ.6 : ಸಹಕಾರ ರತ್ನ ಕೊಳಕೆ ಇರ್ವತ್ತೂರು ಭಾಸ್ಕರ ಎಸ್. ಕೋಟ್ಯಾನ್‌ರಿಗೆ ನಾಗರಿಕ ಪೌರ ಸನ್ಮಾನ “ಭಾಸ್ಕರಾಭಿನಂದನೆ”

    Comments are closed.

    Demo
    Don't Miss
    Local News December 11, 2025

    ಉಡುಪಿ : ರಸ್ತೆಯ ಹೊಂಡಕ್ಕೆ ಬಿದ್ದು ಮರಕ್ಕೆ ಢಿಕ್ಕಿ ಹೊಡೆದ ಟಿಪ್ಪರ್: ಚಾಲಕ ಮೃತ್ಯು

    ಉಡುಪಿ, ಡಿ. 11 : ನಿಯಂತ್ರಣ ತಪ್ಪಿದ ಟಿಪ್ಪರೊಂದು ರಸ್ತೆಯಲ್ಲಿನ ಗುಂಡಿಗೆ ಬಿದ್ದು, ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ…

    ಉತ್ತರ ಜಪಾನ್‌ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ: 23 ಮಂದಿಗೆ ಗಾಯ

    December 10, 2025

    ಡಿ.13, 14: ಮಂಗಳೂರಿನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವ

    December 9, 2025

    ಮಂಡ್ಯ : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ- ಮೂವರು ಮೃತ್ಯು

    December 9, 2025
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2025 All Right Reserved. Designed by Blueline Computers.

    Type above and press Enter to search. Press Esc to cancel.