ಮಂಗಳೂರು, ನ. 15 : ಅಖಿಲ ಭಾರತದ 72ನೇ ಸಪ್ತಾಹವು ಭಾನುವಾರ ಮಂಗಳೂರಿನಲ್ಲಿ ನಡೆಯಲಿದೆ ಎಂದು ಎಸ್ ಸಿಡಿಸಿಸಿ ಬ್ಯಾಂಕ್ನ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದ್ದಾರೆ. ಅವರು ಶನಿವಾರ ಸಂಜೆ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು
ಕಳೆದ 30 ವರ್ಷಗಳಿಂದ ನಡಿತಾ ಇರುವ ಸಹಕಾರ ಸಪ್ತಾಹ ಜನರಿಗೆ ತಲುಪುವಲ್ಲಿ ಯಶಸ್ವಿಯಾಗಿದೆ. ಈ ಬಾರಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ, ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಮಂಗಳೂರು ಇದರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ (ರಿ.) ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು, ಸೌಹಾರ್ಧ ಸಹಕಾರ ಸಂಘಗಳು ಹಾಗೂ ಎಲ್ಲಾ ವಿಧದ ಸಹಕಾರ ಸಂಘಗಳು ಮತ್ತು ಸಹಕಾರ ಇಲಾಖೆಯ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.
ಈಗಾಗಲೇ ‘ಸಹಕಾರ ಮಾಣಿಕ್ಯ ಪ್ರಶಸ್ತಿ’ಯನ್ನು 3 ಸಹಕಾರ ಸಂಸ್ಥೆಗಳಿಗೆ ಘೋಷಿಸಲಾಗಿದ್ದು.ಉಡುಪಿ, ಮಂಗಳೂರು ಜಿಲ್ಲೆಯ ಸಹಕಾರಿಗಳಿಗೆ ಸಹಕಾರ ಮಾಣಿಕ್ಯ ಪ್ರಶಸ್ತಿ ನೀಡಲಿದ್ದೇವೆ. ಪ್ರಶಸ್ತಿ ಜೊತೆಗೆ 5ಗ್ರಾಂ ಚಿನ್ನದ ಪದಕ,10,000 ನಗದು ಹಾಗೂ ಪಾರಿತೋಷಕ ನೀಡಲಾಗುವುದು. ಅಲ್ಲದೆ ಕೆಎಂಎಫ್ ನಿಂದ ನಾಳೆ ಎರಡು ಹೊಸ ಉತ್ಪನ್ನಗಳು ವೇದಿಕೆಯಲ್ಲಿ ಬಿಡುಗಡೆ ಆಗಲಿದೆ.ಕಾರ್ಯಕ್ರಮಕ್ಕೆ ಸುಮಾರು 15,000 ಜನರು ಭಾಗವಹಿಸುವ ನಿರೀಕ್ಷೆ ಇದ್ದು ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲರಿಗೂ ಊಟೋಪಚಾರದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಸಹಕಾರಿ ಸಪ್ತಾಹ ಕಾರ್ಯಕ್ರಮ ಬೆಳಿಗ್ಗೆ 9 ಗಂಟೆಗೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಆವರಣದಿಂದ ಕರುನಾಡಿನ ವೈವಿಧ್ಯತೆಯನ್ನೊಳಗೊಂಡ ಸಹಕಾರ ಮೆರವಣಿಗೆ ನಡೆಯಲಿದೆ.ಇದರಲ್ಲಿ 50 ಕ್ಕೂ ಹೆಚ್ಚು ಟ್ಯಾಬ್ಲೋ ಜೊತೆಗೆ ಕರ್ನಾಟಕದ ವಿವಿಧ ಡೊಳ್ಳುಕುಣಿತ ಸೇರಿದಂತೆ ಜಾನಪದ ನೃತ್ಯಗಳ ಪ್ರದರ್ಶನವಿರಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ವಿನಯ್ ಕುಮಾರ್ ಸೂರಿಂಜೆ, ರವಿರಾಜ ಹೆಗ್ಡೆ, ರವೀಂದ್ರ ಕಂಬಳಿ, ಗೋಪಾಲಕೃಷ್ಣ ಭಟ್, ಪ್ರಸಾದ್,ಎಚ್.ಎಂ ರಮೇಶ್, ಸದಾಶಿವ ಉಳ್ಳಾಲ್, ಎ.ಆರ್. ರಘು, ಜಯರಾಜ್ ರೈ, ಐಕಳ ಬಾವಾ ದೇವಿಪ್ರಸಾದ್ ಶೆಟ್ಟಿ, ಜಯರಾಜ ರೈ, ಭಾಸ್ಕರ ಎಸ್ ಕೋಟ್ಯಾನ್ , ಮೋನಪ್ಪ ಶೆಟ್ಟಿ ಎಕ್ಕಾರು, ಗೋಪಿನಾಥ್ ಭಟ್ ಮತ್ತಿತ್ತರರು ಉಪಸ್ಥಿತರಿದ್ದರು.











