ಮಂಗಳೂರು, ನ. 22 : ನಗರದ ಉರ್ವ ಸ್ಟೋರ್ನ ತುಳುಭವನದ ಸಿರಿ ಚಾವಡಿಯಲ್ಲಿ ತುಳುನಾಡು ರಕ್ಷಣಾ ವೇದಿಕೆ (ರಿ) ಮತ್ತು ತುಳುನಾಡು ಸೂರ್ಯ ಪತ್ರಿಕೆ ಜಂಟಿಯಾಗಿ ಆಯೋಜಿಸಿದ 72ನೇ ಸಹಕಾರ ಸಪ್ತಾಹ ಆಚರಣೆಯ ಅಂಗವಾಗಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಹಕಾರ ಕ್ಷೇತ್ರದಲ್ಲಿ ನೀಡಿದ ಅತ್ಯುತ್ತಮ ಕೊಡುಗೆಯನ್ನು ನೀಡಿದ ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಅವರಿಗೆ 2025 ರ ಪ್ರತಿಷ್ಠಿತ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಗೌರವ ಸೂಚಕವಾಗಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೋ ಅವರನ್ನು ಶಾಲು ಹೊದಿಸಿ, ಪುಷ್ಪಗುಚ್ಛ, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ತುಳುನಾಡು ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ವಹಿಸಿದ್ದರು.ಕಾರ್ಯಕ್ರಮವನ್ನು ಶ್ರೀ ರೋಶನ್ ಮಾಡ್ತಾ ನಿರೂಪಿಸಿದರು.
ಈ ಸಂದರ್ಭದಲ್ಲಿ ಅದಾನಿ ಗ್ರೂಪ್ನ ಅಧ್ಯಕ್ಷರು ಮತ್ತು ಕಾರ್ಯನಿರ್ವಾಹಕ ನಿರ್ದೇಶಕರಾದ ಕಿಶೋರ್ ಆಳ್ವ, ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷರಾದ ಎ.ಸಿ. ಭಂಡಾರಿ, ಧರ್ಮವಲೋಕನದ ಗಡಿಕಾರರು ಮತ್ತು ಅಧ್ಯಕ್ಷರಾದ ದೋಣಿಂಜೆ ಗುತ್ತು ಪ್ರಮೋದ್ ಕುಮಾರ್ ರೈ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷರಾದ ಶ್ರೀ ಮೋಹನಂಗಯ್ಯ ಸ್ವಾಮಿ, ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸಮಿತಿಯ ಅಧ್ಯಕ್ಷರಾದ ಕಿರಣ್ ಬುಡ್ಲೆಗುತ್ತು, ವಕೀಲರ ಘಟಕ ತುಳುನಾಡ ರಕ್ಷಣಾ ವೇದಿಕೆ ಅಧ್ಯಕ್ಷರಾದ ರಾಘವೇಂದ್ರ ರಾವ್, ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಫ್ರಾಂಕಿ ಡಿಸೋಜ ಕೊಳಲಗಿರಿ, ಮೂಡುಬಿದಿರೆಯ ಜೈನಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಶಿವ ದುರ್ಗಾಂಬಾ ಮಠದ ಶ್ರೀ ಶಿವಯೋಗಿ ದುರ್ಗಾನಂದ ಸ್ವಾಮೀಜಿ, ಮಾಜಿ ಸಚಿವ ಶ್ರೀ ಕೃಷ್ಣ ಪಾಲೆಮಾರ್, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಮೂಡುಬಿದಿರೆಯ ಜೈನಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಶಿವ ದುರ್ಗಾಂಬಾ ಮಠದ ಶ್ರೀ ಶಿವಯೋಗಿ ದುರ್ಗಾನಂದ ಸ್ವಾಮೀಜಿ, ಮಾಜಿ ಸಚಿವ ಶ್ರೀ ಕೃಷ್ಣ ಪಾಲೆಮಾರ್, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಉಪಸ್ಥಿತರಿದ್ದರು.











