ಮಂಗಳೂರು, ನ. 24 : ಅಪರೇಷನ್ ಲಂಡನ್ ಕೆಫೆ ಕನ್ನಡ ಚಿತ್ರವು ನ. 28ರಂದು ಕನ್ನಡ ಮರಾಠಿ ಮತ್ತು ಹಿಂದಿ ಭಾಷೆಯಲ್ಲಿ ತೆರೆ ಕಾಣಲಿದೆ. ನಿರ್ಮಾಪಕ ವಿಜಯ್ ಕುಮಾರ್ ಶೆಟ್ಟಿ ಅವರು ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ ಎಂದು ನಟ ಅರ್ಜುನ್ ಕಾಪಿಕಾಡ್ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಢಿಯಲ್ಲಿ ತಿಳಿಸಿದರು.
ನಟ ಕವೀಶ್ ಶೆಟ್ಟಿ ಮಾತಾಡಿ, ಕನ್ನಡ ಮತ್ತು ಮರಾಠಿ ಎರಡೂ ಭಾಷೆಯಲ್ಲಿ ಏಕಕಾಲಕ್ಕೆ ಚಿತ್ರೀಕರಣಗೊಂಡಿರುವ ಈ ಚಿತ್ರವನ್ನು ವಿಜಯ್ ಕುಮಾರ್ ಶೆಟ್ಟಿ ಅವರಾಲ್, ರಮೇಶ್ ಕೊಠಾರಿ, ದೀಪಕ್ ರಾಣೆ ಮತ್ತು ವಿಜಯ ಪ್ರಕಾಶ್ ಇಂಡಿಯನ್ ಫಿಲಂ ಫ್ಯಾಕ್ಟರಿ ಮತ್ತು ದೀಪಕ್ ರಾಣೆ ಫಿಲಂಸ್ ಲಾಂಛನದ ಅಡಿಯಲ್ಲಿ ಬಹಳ ಅದ್ದೂರಿಯಾಗಿ ನಿರ್ಮಿಸಿದ್ದಾರೆ. ಸಡಗರ ರಾಘವೇಂದ್ರ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ ಎಂದರು.
ನಿರ್ಮಾಪಕ ವಿಜಯ್ ಕುಮಾರ್ ಶೆಟ್ಟಿ ಮಾತಾಡಿ ತುಳು ಚಿತ್ರರಂಗದ ನಟ ಅರ್ಜುನ್ ಕಾಪಿಕಾಡ್ ಈ ಚಿತ್ರದಲ್ಲಿ ಒಬ್ಬ ಖಡಕ್ ಆರ್ಮಿ ಆಫೀಸರ್ ಪಾತ್ರದಲ್ಲಿ ಮೊದಲ ಬಾರಿ ಕಾಣಿಸಿಕೊಂಡಿದ್ದಾರೆ. ಹಾಗೆ ಮರಾಠಿ ಚಿತ್ರರಂಗದ ನಟಿ ಶಿವಾನಿ ಸುರ್ವೆಯ ಜೊತೆ ಅದೇ ಮರಾಠಿಯ ವಿರಾಟ್ ಮಡ್ಕ, ಪ್ರಸಾದ್ ಖಾಂಡೇಕರ್ ಮುಂತಾದವರು ವಿಭಿನ್ನವಾದ ಚಾಲೆಂಜಿಂಗ್ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಉಳಿದಂತೆ ಕನ್ನಡದ ಚಿರಪರಿಚಿತ ಬಿ. ಸುರೇಶ್, ಕೃಷ್ಣ ಹೆಬ್ಬಾಳೆ, ನೀನಾಸಂ ಅಶ್ವಥ್, ಧರ್ಮೇಂದ್ರ ಅರಸ್ ಜೊತೆಯಲ್ಲಿ ಇನ್ನೂ ಹೆಸರಾಂತ ಕನ್ನಡ ಮತ್ತು ಮರಾಠಿಯ ಕಲಾವಿದರು ತೆರೆ ಹಂಚಿಕೊಂಡಿದ್ದಾರೆ“ ಎಂದರು.











