ಮಂಗಳೂರು, ಡಿ. 9 : ಸಂತ ಮದರ್ ತೆರೆಸಾ ವಿಚಾರ ವೇದಿಕೆ ಮಂಗಳೂರು ಹಾಗೂ ಕ್ಯಾಥೋಲಿಕ್ ಸಭಾ ಮಂಗಳೂರು ಪ್ರದೇಶ್ ಆಶ್ರಯದಲ್ಲಿ ಡಿಸೆಂಬರ್13,14ರಂದು ಸೌಹಾರ್ದ ಕ್ರಿಸ್ಮಸ್ ಉತ್ಸವ ಕದ್ರಿಪಾರ್ಕ್‌ನಲ್ಲಿ ನಡೆಯಲಿದೆ ಎಂದು ಸಂತ ಮದರ್ ತೆರೆಸಾ ವಿಚಾರ ವೇದಿಕೆ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋ ಅವರು ಮಂಗಳವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಬಳಿಕ ಮಾತಾಡಿದ ಅವರು ಎರಡು ದಿನಗಳ ಉತ್ಸವದ ಸಂದರ್ಭದಲ್ಲಿ ಮಧ್ಯಾಹ್ನ 2:30ರಿಂದ ರಾತ್ರಿ 9:30ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕ್ರಿಸ್ಮಸ್ ಕೇಲ್ ಸ್ಪರ್ಧೆ, ಕ್ಯಾರಲ್ ಹಾಡುಗಳ ಸ್ಪರ್ಧೆ, ಕ್ರಿಸ್ಮಸ್ ಸ್ಟಾರ್ ಸ್ಪರ್ಧೆ, ಕ್ರಿಸ್ಮಸ್ ಕೇಕ್ ಸ್ಪರ್ಧೆ, ವೈನ್ ಮೇಳ, ಆಹಾರ ಮಳಿಗೆಗಳು, ಸಭಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದರು.
ಈ ಸೌಹಾರ್ದ ಕ್ರಿಸ್ಮಸ್ ಉತ್ಸವವು ಸಾಮುದಾಯಿಕ ಏಕತೆ ಹಾಗೂ ಶಾಂತಿಯ ಸಂದೇಶ ಸಾರುವ ವೇದಿಕೆಯಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಸಂಚಾಲಕ ಸ್ಟ್ಯಾನಿ ಲೋಬೋ, ಕ್ಯಾಥೋಲಿಕ್ ಸಭಾ ಮಂಗಳೂರು ಪ್ರದೇಶ್ ಅಧ್ಯಕ್ಷ ಸಂತೋಷ್ ಡಿಸೋಜ, ಪ್ರಚಾರ ಸಮಿತಿಯ ಸ್ಟ್ಯಾನ್ಲಿ ಬಂಟ್ವಾಳ್, ಸಮರ್ಥ್ ಭಟ್, ರೆಹಮಾನ್ ಖಾನ್ ಕುಂಜತ್ತಬೈಲ್ ಉಪಸ್ಥಿತರಿದ್ದರು.











