ಟೋಕಿಯೊ,ಡಿ. 10 : ಉತ್ತರ ಜಪಾನ್‌ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
ಘಟನೆಯಲ್ಲಿ 23 ಮಂದಿ ಗಾಯಗೊಂಡಿದ್ದಾರೆ. ಸುನಾಮಿ ಅಲೆಗಳು ಎದ್ದಿವೆ. ಹಲವು ಮನೆಗಳು ನೆಲಸಮಗೊಂಡಿವೆ. ಅಮೋರಿ ಕರಾವಳಿಯಿಂದ ಸುಮಾರು 80 ಕಿ.ಮೀ ದೂರದಲ್ಲಿರುವ ಪೆಸಿಫಿಕ್ ಮಹಾಸಾಗರದಲ್ಲಿ ರಾತ್ರಿ 11.15 ಕ್ಕೆ ಭೂಕಂಪ ಸಂಭವಿಸಿದೆ. ಮುನ್ನೆಚ್ಚರಿಕೆಯಾಗಿ ದುರ್ಬಲ ಪ್ರದೇಶಗಳಲ್ಲಿರುವ ನಿವಾಸಿಗಳು ಎತ್ತರದ ಪ್ರದೇಶಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ.
ಭೂಕಂಪ ಪೀಡಿತ ಸುಮಾರು 800 ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಶಿಂಕನ್ಸೆನ್ ಸೇವೆಗಳು ಮತ್ತು ಕೆಲವು ಸ್ಥಳೀಯ ರೈಲುಗಳನ್ನು ನಿಲ್ಲಿಸಲಾಗಿದೆ.ಭೂಕಂಪದಲ್ಲಿ ಉಂಟಾಗಿರುವ ಹಾನಿಯ ಪ್ರಮಾಣದ ಕುರಿತು ಜಪಾನ್ ಸರ್ಕಾರವು ಅವಲೋಕನ ನಡೆಸುತ್ತಿದೆ ಎನ್ನಲಾಗಿದೆ.











