ವಿಟ್ಲ ಡಿ. 14 : ಕೆಎಸ್‌ಆರ್‌ಟಿಸಿ ಬಸ್ ಮತ್ತು ಓಮ್ನಿ ಕಾರು ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರುವಾಯಿ ಸಮೀಪ ಮುಳಿಯ ಎಂಬಲ್ಲಿ ಭಾನುವಾರ ನಡೆದಿದೆ. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಮೈರ ಮೋನಪ್ಪ ಕುಲಾಲ್ (65) ಎಂದು ಗುರುತಿಸಲಾಗಿದೆ.
ವಿಟ್ಲದಿಂದ ಪೆರುವಾಯಿ ಕಡೆಗೆ ಹೋಗುತ್ತಿದ್ದ ಓಮ್ನಿ ಕಾರು ಮತ್ತು ಪಕಳ ಕುಂಜದಿಂದ ವಿಟ್ಲ ಕಡೆಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮುಳಿಯ ಎಂಬಲ್ಲಿ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಮೈರ ಮೋನಪ್ಪ ಕುಲಾಲ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಸಾವನ್ನಪ್ಪಿ. ಮೂವರು ಪ್ರಯಾಣಿಕರು ತೀವ್ರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ.
ಮೂವರು ಪ್ರಯಾಣಿಕರು ತೀವ್ರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಮೋನಪ್ಪ ಕುಲಾಲ್ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.
ಘಟ ನೆ ನಡೆದೆ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ತನಿಖೆ ನಡೆಸಿದ್ದಾರೆ.











