ಮಂಗಳೂರು, ಡಿ.22 : ದಕ್ಷಿಣ ಕನ್ನಡ ಜಿಲ್ಲಾಡಳಿತ , ಸ್ಥಳೀಯ ಸಂಘ ಸಂಸ್ಥೆ ಗಳ ಸಹಯೋಗದೊಂದಿಗೆ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಒಂದು ತಿಂಗಳು ನಡೆಯಲಿರುವ ಕರಾವಳಿ ಉತ್ಸಾವಕ್ಕೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಅವರು ಶನಿವಾರ ಚಾಲನೆ ನೀಡಿದರು.
ಬಳಿಕ ಮಾತಾಡಿದ ಅವರು,ಕರಾವಳಿ ಉತ್ಸವಕ್ಕೆ ರಾಜ್ಯ ಸರಕಾರ 2 ಕೋಟಿ ರೂ. ಅನುದಾನ ಮಂಜೂರು ಮಾಡಿದೆ.ಪ್ರಥಮ ಬಾರಿಗೆ ರಾಜ್ಯ ಸರಕಾರ ಕರಾವಳಿ ಉತ್ಸಾವಕ್ಕೆ ದೊಡ್ಡ ಪ್ರಮಾಣದ ಅನುದಾನ ಕೊಟ್ಟಿದೆ .ಕರಾವಳಿ ಉತ್ಸವ ಒಂದು ತಿಂಗಳುಗಳ ಕಾಲ ನಡೆಯಲಿದೆ. ಈ ದಿನಗಳಲ್ಲಿ ವಿವಿಧ ರೀತಿಯ ಸಾಂಸ್ಕೃತಿಕ, ಕ್ರೀಡಾ ಮತ್ತು ಮನೋರಂಜನಾ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಮಂಜುನಾಥ ಭಂಡಾರಿ,ಐವನ್ ಡಿ ಸೋಜ,ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂಎ ಗಫೂರ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಕರ್ನಾಟಕ ಪರಿಸರ ಪವ್ರವಾಸೋದ್ಯಮ ಮಂಡಳಿ ಅಧ್ಯಕ್ಷೆ ಶಾಲೆಟ್ ಲವಿನಾ ಪಿಂಟೊ,ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆಯ ಅಧ್ಯಕ್ಷೆ ಲಾವಣ್ಯ ಬಲ್ಲಾಳ್, ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ರಾಜ್ಯ ಕಾರ್ಮಿಕ ಕನಿಷ್ಠ ವೇತನಾ ಸಲಹಾ ಮಂಡಳಿ ಅಧ್ಯಕ್ಷ ಟಿಎಂ ಶಹೀದ್, ಮಂಗಳೂರು ಪೊಲೀಸ್ ಆಯಕ್ತ ಸುಧೀರ್ ಕುಮಾರ್ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.ಪ್ರಾಸ್ತಾವಿಕವಾಗಿ ಮಾತನಾಡಿದರು.ಅಪರ ಜಿಲ್ಲಾಧಿಕಾರಿ ರಾಜು ಕೆ ಸ್ವಾಗತಿಸಿದರು. ಮನಪಾ ಅಯುಕ್ತ ರವಿಚಂದ್ರ ನಾಯಕ್ ವಂದಿಸಿದರು.











