ಮಂಗಳೂರು,ಡಿ. 28 : ಸಂಸದ ಬೃಜೇಶ್ ಚೌಟರ ನೇತೃತ್ವದ 9ನೇ ವರ್ಷದ ರಾಮ-ಲಕ್ಷ್ಮಣ ಜೋಡುಕರೆ ಮಂಗಳೂರು ಕಂಬಳದಲ್ಲಿ ಸಂಜೆ ನಡೆದ ಸಭಾಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಸಭಾಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ಕಂಬಳ ಗ್ರಾಮೀಣ ಜನರ ಪರಿಶ್ರಮ ಮತ್ತು ಗೌರವದ ಸಂಕೇತವೂ ಆಗಿದೆ. ಗ್ರಾಮೀಣ ಪ್ರದೇಶದಲ್ಲಿದ್ದ ಕಂಬಳವನ್ನು ಸಂಸದ ಕ್ಯಾ.ಬೃಜೇಶ್ ಚೌಟರು ನಗರ ಪ್ರದೇಶಕ್ಕೆ ಪರಿಚಯಿಸಿದ್ದಾರೆ. ಕಂಬಳ ಒಂದು ಗ್ರಾಮೀಣ ಕ್ರೀಡೆಯಲ್ಲ ಅದು ರಾಜ್ಯದ ಅಸ್ಥಿತೆ ಎಂದರು.
ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದ ಕ್ಯಾ.ಬೃಜೇಶ್ ಚೌಟ ಅವರು, ‘ಬ್ಯಾಕ್ ಟು ಊರು ಪರಿಕಲ್ಪನೆ’ಯು ದೇಶ ಮತ್ತು ವಿದೇಶಗಳಲ್ಲಿ ನೆಲೆಸಿರುವವ ಕರಾವಳಿಗರು ತಾಯ್ನಾಡಿಗೆ ಸಾಮಾಜಿಕ ಕೊಡುಗೆಗಳನ್ನು ನೀಡುವಂತೆ ಪ್ರೇರೇಪಿಸುವ ಕೆಲಸವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ‘ಬ್ಯಾಕ್ ಟು ಊರು’ ಪರಿಕಲ್ಪನೆಯಡಿ ಸಾಧನೆಗೈದ ಒಂಬತ್ತು ಉದ್ಯಮಿಗಳನ್ನು ಸನ್ಮಾನಿಸಲಾಯಿತು. ಎಂ.ಆರ್.ಜಿ. ಗ್ರೂಪ್ ನ ಮ್ಹಾಲಕರು ಮತ್ತು ಮಂಗಳೂರು ಕಂಬಳ ಸಮಿತಿಯ ಗೌರವಾಧ್ಯಕ್ಷ ಪ್ರಕಾಶ ಶೆಟ್ಟಿ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ಕಾರ್ಯಕ್ರಮದಲ್ಲಿ ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಭರತ್ ಶೆಟ್ಟಿ, ಶಾಸಕರಾದ ರಾಜೇಶ್ ನಾಯ್, ಶಾಸಕರಾದ ಭಾಗೀರಥಿ ಮುರುಳ್ಯ, ಶಾಸಕರಾದ ಹರೀಶ್ ಪೂಂಜಾ, ಶಾಸಕರಾದ ಗುರುರಾಜ್ ಗಂಠಿಹೊಳಿ, ಸಂತೋಶ್ ಶೆಟ್ಟಿ ಪುಣೆ, ಮಾಜಿ ಸಚಿವ ಪ್ರಮೋದ್ ಮದ್ವರಾಜ್,ಉದ್ಯಮಿಗಳಾದ ಶಶಿಧರ ಶೆಟ್ಟಿ ಬರೋಡ ಮುಂಬೈ, , ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಸೇರಿದಂತೆ ಹಲವಾರು ಗಣ್ಯರು, ಮುಖಂಡರು, ಕಂಬಳಾಭಿಮಾನಿಗಳು ಉಪಸ್ಥಿತರಿದ್ದರು.










