ಬೈಕಂಪಾಡಿ, ಜ. 05 : ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿನ ಪ್ಲೈವುಡ್ ಫ್ಯಾಕ್ಟರಿಯೊಂದರಲ್ಲಿ ಭಾನುವಾರ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದೆ. ರಝಾಕ್ ಎಂಬವರಿಗೆ ಸೇರಿದ ಅಕೋಲೈಟ್ ಇಂಡಸ್ಟ್ರಿಯಲ್ ಸಿಸ್ಟಮ್ ಪ್ರೈವೇಟ್ ಲಿಮಿಟೆಡ್ ಎಂಬ ಪ್ಲೈವುಡ್ ಫ್ಯಾಕ್ಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಾಗಿದೆ.
ಕಂಪೆನಿಯಲ್ಲಿದ್ದ ಪ್ಲೈವುಡ್‌ಗಳು ಸುಟ್ಟು ಭಸ್ಮವಾಗಿದ್ದು, ಸುಮಾರು 1ಕೋ.ರೂ. ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಬೆಂಕಿ ಅವಘಡ ಅಪಾರ ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ.
ಸ್ಥಳಕ್ಕೆ ಅಗ್ನಿ ಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸಿವೆ.ಪಣಂಬೂರು ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.











