ಮಂಗಳೂರು, ಜ.20: ನಗರದ ಹೊಯ್ಗೆ ಬಝಾರ್ ನಲ್ಲಿರುವ ಅಲ್ಬುಕರ್ಕ್ & ಸನ್ಸ್ ಹೆಂಚಿನ ಕಾರ್ಖಾನೆಯಲ್ಲಿ ಮಂಗಳವಾರ ಬೆಂಕಿ ಅವಘಡ ಸಂಭವಿಸಿದೆ.
ಕಾರ್ಖಾನೆಯಲ್ಲಿ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡು ಕಾರ್ಖಾನೆ ಆವರಣವನ್ನು ವೇಗವಾಗಿ ವ್ಯಾಪಿಸಿದೆ. ಕಾರ್ಖಾನೆಯ ಆವರಣದಲ್ಲಿ ಹೆಂಚು ಸುಡಲು ಸಂಗ್ರಹಿಸಿಟ್ಟಿದ್ದ ಕಟ್ಟಿಗೆ ಮತ್ತು ಇತರ ದಹ್ಯ ವಸ್ತುಗಳಿದ್ದ ಕಾರಣ ಬೆಂಕಿಯ ತೀವ್ರತೆ ಹೆಚ್ಚಾಗಿತ್ತು. ಬೆಂಕಿ ಅವಘಡದಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ ಎನ್ನಲಾಗಿದೆ ಎಂದು ವರದಿಯಾಗಿದೆ.
ಪಾಂಡೇಶ್ವರ ಮತ್ತು ಕದ್ರಿ ಅಗ್ನಿಶಾಮಕ ಠಾಣೆಗಳ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ನಡೆಸಿದ್ದಾರೆ.











