ಮಂಗಳೂರು, ಜ. 25: ಹಂಪನಕಟ್ಟೆಯಲ್ಲಿರುವ ಅಕ್ಬರ್ ಕಾಂಪ್ಲೆಕ್ಸ್ನಲ್ಲಿ ಶನಿವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದಲ್ಲಿದ್ದ ಹಲವು ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿ ಅವಘಡದಲ್ಲಿ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ನಷ್ಟವಾಗಿದೆ ಎಂದು ವರದಿಯಾಗಿದೆ.
ಬೆಂಕಿಯಿಂದಾಗಿ ಪರಿಸರದಲ್ಲಿ ದಟ್ಟವಾದ ಹೊಗೆ ಆವರಿಸಿದ್ದು, ಪಕ್ಕದ ಲಾಡ್ಜ್ನಲ್ಲಿದ್ದವರು ಇಂದರಿಂದ ತೊಂದರೆ ಅನುಭವಿಸಿದ್ದಾರೆಎಂದು ಹೇಳಲಾಗಿದೆ. ಹೇಗೆ ಹೊತ್ತಿಕೊಂಡಿತು ಇದರ ಬಗ್ಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್ ಈ ಅವಘಡಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.
ಪೊಲೀಸರು, ಅಗ್ನಿ ಶಾಮಕ ದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದ್ದಾರೆ.











