ಕೊಲಂಬಿಯಾ, ಜ. 29 : ಈಶಾನ್ಯ ಕೊಲಂಬಿಯಾದ ನಾರ್ಟೆ ಡಿ ಸ್ಯಾಂಟ್ಯಾಂಡರ್ ಪ್ರಾಂತ್ಯದ ಗ್ರಾಮೀಣ ಪ್ರದೇಶದಲ್ಲಿ ಬುಧವಾರ ಸಣ್ಣ ವಿಮಾನಯೊಂದು ಪತನಗೊಂಡಿದೆ. ಈ ಘಟನೆಯಲ್ಲಿ ವಿಮಾನದಲ್ಲಿದ್ದ ಸಂಸದ ಸೇರಿದಂತೆ ಎಲ್ಲಾ 15 ಜನರು ಅಪಘಾತದಲ್ಲಿ ಸಾವನಪ್ಪಿದ್ದಾರೆ ಎಂದು ವರದಿಯಾಗಿದೆ.
ಸರ್ಕಾರಿ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಈ ವಿಮಾನವು ಬೆಳಗ್ಗೆ 11.42 ಕ್ಕೆ ಕುಕುಟಾ ವಿಮಾನ ನಿಲ್ದಾಣದಿಂದ ಪರ್ವತಗಳಿಂದ ಆವೃತವಾದ ಓಕಾನಾ ನಗರಕ್ಕೆ ಹೊರಟಿದೆ.ಮಧ್ಯಾಹ್ನದ ಸುಮಾರಿಗೆ ಹತ್ತಿರದ ಓಕಾನಾದಲ್ಲಿ ಇಳಿಯುವಾಗ ನಿಯಂತ್ರಣ ಕಳೆದುಕೊಂಡು ಪತನಗೊಂಡಿದೆ. ದುರಂತದಲ್ಲಿ ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಕೊಲಂಬಿಯಾದ ನಾಗರಿಕ ವಿಮಾನಯಾನ ಪ್ರಾಧಿಕಾರ ಮಾಹಿತಿ ನೀಡಿದೆ.
ವಿಮಾನವನ್ನು ಹುಡುಕಲು ಮತ್ತು ಶವಗಳನ್ನು ಹೊರತೆಗೆಯಲು ಸರ್ಕಾರ ವಾಯುಪಡೆಯನ್ನು ನಿಯೋಜಿಸಲಾಗಿದೆ ಎನ್ನಲಾಗಿದೆ.











