ಬೆಂಗಳೂರು, ಜ. 31: ಬೆಂಗಳೂರಿನ ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ‘ಕಾನ್ಸಿಡೆಂಟ್ ಗ್ರೂಪ್’ನ ಸಂಸ್ಥಾಪಕ ಮತ್ತು ಮಾಲೀಕರಾದ ಸಿ.ಜೆ. ರಾಯ್ ಅವರು ಶುಕ್ರವಾರ (ಜ.30) ತಮ್ಮ ಕಚೇರಿಯಲ್ಲಿ ಐಟಿ ಶೋಧ ನಡೆಯುತ್ತಿದ್ದಾಗಲೇ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಐಟಿ ಅಧಿಕಾರಿಗಳು ದಾಳಿ ನಡೆಸಿ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಸಿ.ಜೆ.ರಾಯ್ ತನ್ನ ಗನ್‌ನಿಂದ ಗುಂಡು ಹಾರಿಸಿಕೊಂಡು ಜೀವ ಕಳೆದುಕೊಂಡಿದ್ದಾರೆ. ಅವರನ್ನು ತಕ್ಷಣ ಎಚ್‌ಎಸ್‌ಆರ್ ಲೇಔಟ್ನ ನಾರಾಯಣ ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಿಜೆ ರಾಯ್ ಸಾವನ್ನಪ್ಪಿದರು ಎಂದು ವರದಿಯಾಗಿದೆ.
ರಿಯಲ್ ಎಸ್ಟೇಟ್ ಲೇಔಟ್, ಹೋಟೇಲ್, ರೆಸಾರ್ಟ್, ಶಿಕ್ಷಣ ಸಂಸ್ಥೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಿ.ಜೆ.ರಾಯ್ ಬಂಡವಾಳ ಹೂಡಿದ್ದರು. ಯಶಸ್ವಿ ಉದ್ಯಮಿಯಾಗಿದ್ದ ಅವರು ಕಾನ್ಸಿಡೆಂಟ್ ಗ್ರೂಪ್ ಹೆಸರಿನಲ್ಲಿ ಉದ್ಯಮ ನಡೆಸುತ್ತಿದ್ದರು.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.











