ಉಳ್ಳಾಲ : ಕಾಪಿಕಾಡು ಉಮಾಪುರಿಯ ಶ್ರೀ ಉಮಾಮೇಶ್ವರೀ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಫೆ. 1ರಿಂದ ಫೆ. 6ರವರೆಗೆ ನಡೆಯಲಿದೆ. ಫೆ. 7 ಮತ್ತು 8 ರಂದು ವಾರ್ಷಿಕ ಮಹೋತ್ಸವ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಸತೀಶ್ ಕುಂಪಲ ಅವರು ದೇವಸ್ಥಾನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ಶ್ರೀ ಕ್ಷೇತ್ರದ ತಂತ್ರಿವರ್ಯರಾದ ಬ್ರಹ್ಮಶ್ರೀ ಕುಂಟಾರು ರವೀಶ್ ತಂತ್ರಿಯವರ ನೇತೃತ್ವದಲ್ಲಿ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಮತ್ತು ಭದ್ರಕಾಳಿ ಪ್ರತಿಷ್ಠೆ ನಡೆಯಲಿದ್ದು, ಫೆ. 1ರಂದು ಸಂಜೆ 6.00 ಗಂಟೆಯಿಂದ ವೈಧಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಫೆ. 2ರಿಂದ ಫೆ 6 ರ ವರೆಗೆ ಮಹಾಪೂಜೆ,ಸಭಾ ಕಾರ್ಯಕ್ರಮ ಸಹಿತ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಫೆ 6 ರಂದು ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಶ್ರೀ ಭದ್ರಕಾಳಿ ಪ್ರತಿಷ್ಠೆ, ಪ್ರತಿಷ್ಠಾ ಬಲಿ, ಮಹಾಪೂಜೆ, ಪ್ರಸಾದ ವಿತರಣೆ, ಮಹಾ ಅನ್ನ ಸಂತರ್ಪಣೆ, ಸಂಜೆ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಫೆ 7 ಮತ್ತು 8ರಂದು ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಶ್ರೀ ಉಮಾಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ಎ.ಜೆ. ಶೇಖರ್, ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಅತ್ತಾವರ, ಸೇವಾ ಸಮಿತಿ ಅಧ್ಯಕ್ಷ ದಿನೇಶ್ ರೈ ಕಳ್ಳಿಗೆ, ಪ್ರಧಾನ ಕಾರ್ಯದರ್ಶಿ ಗಣೇಶ್ ಕಾಪಿಕಾಡು, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಗೋಪಿನಾಥ್ ಕಾಪಿಕಾಡು , ಪ್ರಚಾರ ಸಮಿತಿ ಅಧ್ಯಕ್ಷ ಜಗದೀಶ್ ಆಚಾರ್ಯ ತೊಕ್ಕೊಟ್ಟು ಉಪಸ್ಥಿತರಿದ್ದರು.











