ವಿಟ್ಲ, ಫೆ. 08 : ಮಹಿಳೆಯೊಬ್ಬರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಟ್ಲ ಬಸ್‌ಸ್ಟ್ಯಾಂಡ್ ಸಮೀಪ ಭಾನುವಾರ ನಡೆದಿದೆ.
ಮೃತರನ್ನು ವಿಟ್ಲದ ಮುಡ್ನೂರು ಗ್ರಾಮದ ಮರುವಾಳ ನಿವಾಸಿ ಸೀತಾ ಶೆಟ್ಟಿ(68) ಎಂದು ಗುರುತಿಸಲಾಗಿದೆ.
ಅತೀ ವೇಗವಾಗಿ ಬಂದ ಬೈಕ್ ಸೀತಾ ಶೆಟ್ಟಿ ಅವರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ವೃದ್ಧೆ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ವರದಿಯಾಗಿದೆ.
ವಿಟ್ಲ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.











