ಕಾಸರಗೋಡು, ಫೆ. 09 : ಕಾರು ಮತ್ತು ಸ್ಕೂಟರ್ ನಡುವಿನ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ರಾಷ್ಟೀಯ ಹೆದ್ದಾರಿಯ ಆರಿಕ್ಕಾಡಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.
ಮೃತರನ್ನು ಪಚ್ಚಂಬಳ ನಿವಾಸಿ , ಪ್ರಸ್ತುತ ಕನ್ಯಾನದಲ್ಲಿ ವಾಸವಾಗಿರುವ ಅಬ್ದುಲ್ ಮುನೀರ್ (38) ಎಂದು ಗುರುತಿಸಲಾಗಿದೆ.
ಕಾರು ಮತ್ತು ದ್ವಿ ಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.ಅಬ್ದುಲ್ ಮುನೀರ್ ಅವರು ಉಪ್ಪಳದಲ್ಲಿ ಹೊಟೇಲ್ ಕಾರ್ಮಿಕನಾಗಿದ್ದರು.
ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.











