ಮಂಗಳೂರು,ಫೆ, 14 : : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 34 ನೇ ಕದ್ರಿ ಶಿವಭಾಗ್ ವಾರ್ಡಿನ ಎರಡನೇ ಅಡ್ಡರಸ್ತೆಯ 36 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ವೇದವ್ಯಾಸ ಕಾಮತ್ ಅವರು, ಈ ಭಾಗದ ರಸ್ತೆಯು ಸಂಪೂರ್ಣ ಅಭಿವೃದ್ಧಿಯಾಗಬೇಕೆಂಬ ನಿಟ್ಟಿನಲ್ಲಿ ನಿಕಟಪೂರ್ವ ಪಾಲಿಕೆ ಸದಸ್ಯೆಯಾದ ಕಾವ್ಯ ನಟರಾಜ ಆಳ್ವರವರು ಅನೇಕ ಬಾರಿ ಮನವಿ ಮಾಡಿದ್ದರು. ಸತತ ಪ್ರಯತ್ನದ ನಂತರ ಇದೀಗ ಮರಳಿ ಕಾಮಗಾರಿಗೆ ಚಾಲನೆ ದೊರೆಯುತ್ತಿದ್ದು, ಮುಂದಿನ ಕೆಲವು ದಿನಗಳ ಕಾಲ ಕಾಮಗಾರಿಯಿಂದ ಉಂಟಾಗುವ ಅಡಚಣೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ನಟರಾಜ್ ಆಳ್ವ, ಪದ್ಮನಾಭ ನಾಯಕ್, ನವೀನ್ ಶೆಣೈ, ಯೋಗೇಶ್ ಶೆಣೈ, ವರುಣ್ ಅಂಬಟ್, ಅಲ್ಪಸಂಖ್ಯಾತ ಮೋರ್ಚಾದ ಟೀನಾ, ಪೂರ್ಣಿಮಾ, ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.











