ಮಂಗಳೂರು, ಫೆ.16: ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಅಲುಮ್ನಿ ಅಸೋಸಿಯೇಶನ್ ವತಿಯಿಂದ ಹಳೆಯ ವಿದ್ಯಾರ್ಥಿಗಳ ಮಹಾಸಂಗಮ’ಸ್ಮತಿ ಸಂಗಮ 2026′ ಅನ್ನು ಮಾ.1ರಂದು ಮಂಗಳಗಂಗೋತ್ರಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಕಾರ್ಯಕಾರಿ ಸಮಿತಿಯ ಸದಸ್ಯರಾದ ರಾಜಾರಾಮ್ ರಾವ್ ಅವರು ಸೋಮವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು ,ಬೆಳಗ್ಗೆ 8.30ರಿಂದ 10.30ರವರೆಗೆ ವಿವಿಧ ಕ್ರೀಡಾಸ್ಪರ್ಧೆಗಳು ನಡೆಯಲಿವೆ. ಬೆಳಗ್ಗೆ 10.30ಕ್ಕೆ ಕಾರ್ಯಕ್ರಮವನ್ನು ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಉದ್ಘಾಟಿಸುವರು. ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಪಿ.ಎಲ್. ಧರ್ಮ ಅಧ್ಯಕ್ಷತೆ ವಹಿಸುವರು. ಕರ್ನಾಟಕ ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಎ.ಎಂ. ಖಾನ್, ಕಾಲೇಜು ಶಿಕ್ಷಣ ಇಲಾಖೆ ಮಂಗಳೂರು ಜಂಟಿ ನಿರ್ದೇಶಕಿ ಕವಿತಾ ಕೆ.ಆರ್., ಕಣಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಅಧ್ಯಕ್ಷ ಯು.ಕೆ. ಮೋನು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು ಎಂದರು.
11.45ರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಅಪರಾಹ್ನ 3ಕ್ಕೆ ಬಹುಮಾನ ವಿತರಣೆ ಮತ್ತುಸಮಾರೋಪ ಕಾರ್ಯಕ್ರಮ, ಅಪರಾಹ್ನ 3.30ರಿಂದ ಸಂಜೆ 4.30ರವರೆಗೆ ಹಳೆ ವಿದ್ಯಾರ್ಥಿಗಳ ವಿಭಾಗವಾರು ಸಂವಾದ ನಡೆಯಲಿದೆ. ಬೆಳಗ್ಗೆ 8.30ರಿಂದ ಲಗೋರಿ, ಹಗ್ಗಜಗ್ಗಾಟ, ಪುರುಷರಿಗೆ ಕ್ರಿಕೆಟ್, ಮಹಿಳೆಯರಿಗೆ ತ್ರೋಬಾಲ್ ಪಂದ್ಯಾಟ ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾ ಅಧ್ಯಕ್ಷ ರಾಮಕೃಷ್ಣ ರಾವ್ ಕೆ.ಎನ್. ,ಪ್ರದೀಪ್ ಡಿಸೋಜ, ನಾಗೇಶ್ ಹಿರೇಗೌಡರ್ ಉಪಸ್ಥಿತರಿದ್ದರು.











