ಮಂಗಳೂರು, ಫೆ.20 : ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ ಹಾಗೂ 77 ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಕಾರ್ಯಕ್ರಮ ಫೆಬ್ರವರಿ 24ರಂದು ನಡೆಯಲಿದೆ ಎಂದುm ಅಭಿವಂದನಾ ಸಮಿತಿಯ ಅಧ್ಯಕ್ಷರಾದ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಅವರು ಎಸ್ ಸಿಡಿಸಿಸಿ ಬ್ಯಾಂಕ್ ನ ಪ್ರದಾನ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಫೆ. 24ರಂದು ಪೂರ್ವಾಹ್ನ 10.30 ಗಂಟೆಗೆ ಎಸ್ ಸಿಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮದ ಜೊತೆಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಸಮಾರಂಭ ನಡೆಯಲಿದೆ ಎಂದರು.
ಕಾರ್ಯಕ್ರಮವನ್ನು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ಉದ್ಘಾಟಿಸಲಿದ್ದಾರೆ, ಮಾಜಿ ಮುಖ್ಯ ಮಂತ್ರಿ ಎಂ.ವೀರಪ್ಪ ಮೊಯ್ಲಿ ಅಭಿವಂದನಾ ಭಾಷಣ ಮಾಡಲಿದ್ದಾರೆ, ಶಾಸಕ ವೇದವ್ಯಾಸ ಕಾಮತ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬ್ಯಾಂಕ್ ನ ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಭಾಸ್ಕರ್ ಎಸ್. ಕೋಟ್ಯಾನ್ , ಎಸ್.ಬಿ.ಜಯರಾಮ್ ರೈ, ಶಶಿಕುಮಾರ್ ರೈ ಬಾಲ್ಗೊಟ್ಟು, ಸದಾಶಿವ ಉಳ್ಳಾಲ್, ಮೋನಪ್ಪ ಶೆಟ್ಟಿ ಎಕ್ಕಾರು,ವಾದಿರಾಜ ಶೆಟ್ಟಿ, ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಗೋಪಾಲಕೃಷ್ಣ ಭಟ್ ಮೊದಲಾದವರು ಉಪಸ್ಥಿತರಿದ್ದರು.











