ಮಂಗಳೂರು, ಫೆ. 27 : ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ ಸಂಜೆ ಮಂಗಳೂರು ಹೊರವಲಯ ಪಣಂಬೂರು ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಮುಂಭಾಗದಲ್ಲಿ ನಡೆದಿದೆ.
ಮೃತರನ್ನು ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕು ನಿವಾಸಿ ಎಂದು ಗುರುತಿಸಲಾಗಿದೆ. ಶಿವದಾಸ್ ಗಣಪತಿ ನಾಯ್ಕ ಅವರು ಬೈಕಂಪಾಡಿಯ ಔಷಧಿ ತಯಾರಕ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಕೆಲಸ ಮುಗಿಸಿಕೊಂಡು ಬಿಜೈಯಲ್ಲಿರುವ ತಮ್ಮ ಮನೆಗೆ ತೆರಳುತ್ತಿದ್ದ ವೇಳೆ ಲಾರಿಯೊಂದು ಹಿಂದಿನಿಂದ ಬಂದು ಢಿಕ್ಕಿ ಹೊಡೆದ್ದಿದ್ದು, ಢಿಕ್ಕಿಯ ರಭಸಕ್ಕೆ ಅವರು ಲಾರಿಯ ಹಿಂಭಾಗದ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನಪ್ಪಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ನಿರೀಕ್ಷಕ ಶಿವಕುಮಾರ್ ಎಂ. ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.











