ವಾಷಿಂಗ್ಟನ್, ಮಾ. 01 : ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಹತ್ಯೆಯಾಗಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಘೋಷಿಸಿದ್ದಾರೆ.
ಟ್ರೂತ್ ಸೋಶಿಯಲ್’ ಸಾಮಾಜಿಕ ಜಾಲತಾಣದಲ್ಲಿ ಟ್ರಂಪ್ ಅವರು ಪ್ರಕಟಿಸಿದ ಸಂದೇಶದಲ್ಲಿ ಖಮೇನಿ ಅವರನ್ನು “ವಿಶ್ವ ಇತಿಹಾಸದ ಅತ್ಯಂತ ದುಷ್ಟ ವ್ಯಕ್ತಿಗಳಲ್ಲಿ ಒಬ್ಬ” ಎಂದು ಕರೆದಿದ್ದಾರೆ. ಖಮೇನಿ ಸಾವಿನಿಂದ ಇರಾನ್ ಜನತೆಗೆ ತಮ್ಮ ದೇಶವನ್ನು ಮರಳಿ ಪಡೆಯುವ ಅವಕಾಶ ಸಿಕ್ಕಂತಾಗಿದೆ ಎಂದು ಅವರು ಹೇಳಿದ್ದಾರೆ.
ಅಮೆರಿಕ ಮತ್ತು ಇಸ್ರೇಲ್ ಗುಪ್ತಚರ ಸಂಸ್ಥೆಗಳ ಸಮನ್ವಯದಿಂದ ನಡೆದ ನಿಖರ ಬಾಂಬ್ ದಾಳಿಯಲ್ಲಿ ಟೆಹ್ರಾನ್‌ನಲ್ಲಿರುವ ಖಮೇನಿ ನಿವಾಸವನ್ನು ಗುರಿಯಾಗಿಸಲಾಗಿದೆ ಎಂದು ಟ್ರಂಪ್ ತಿಳಿಸಿದ್ದಾರೆ. ಆದರೆ, ಇರಾನ್ ಸರ್ಕಾರ ಇದುವರೆಗೆ ಅಧಿಕೃತವಾಗಿ ಖಮೇನಿ ಸಾವಿನ ಬಗ್ಗೆ ಯಾವುದೇ ದೃಢೀಕರಣ ನೀಡಿಲ್ಲ.










