ಟೆಹ್ರಾನ್, ಮಾ. 02 : ಅಮೆರಿಕ ಮತ್ತು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ, ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದಾರೆ ಎಂದು ಇರಾನ್ನ ಸರ್ಕಾರಿ ಮಾಧ್ಯಮಗಳು ಭಾನುವಾರ ಬೆಳಿಗ್ಗೆ ಅಧಿಕೃತವಾಗಿ ದೃಢಪಡಿಸಿವೆ.
ಅಮೆರಿಕದ ಅತ್ಯಾಧುನಿಕ B-2 ಸ್ಟೈಲ್ ಬಾಂಬರ್‌ಗಳು ಮತ್ತು ಇಸ್ರೇಲ್ನ F-35 ಯುದ್ಧ ವಿಮಾನಗಳು ರೇಡಾರ್ಗಳ ಕಣ್ಣು ತಪ್ಪಿಸಿ ಇರಾನ್ನ ವಾಯುಗಡಿಯನ್ನು ಸದ್ದಿಲ್ಲದೆ ಪ್ರವೇಶಿಸಿ ನಡೆಸಿದ ವೈಮಾನಿಕ ದಾಳಿಯಲ್ಲಿ ಆಯತೊಲ್ಲಾ ಅಲಿ ಖಮೇನಿ ಅವರು ಹತ್ಯೆಯಾಗಿದ್ದಾರೆ ಇರಾನ್ನ ಸರ್ಕಾರಿ ಮಾಧ್ಯಮಗಳು ಖಚಿತಪಡಿಸಿವೆ.
ಅಮೇರಿಕಾ ಮತ್ತು ಇಸ್ರೇಲ್ ಜಂಟಿ ದಾಳಿಯ ಬಳಿಕ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿದೆ. ಇರಾನ್ ಪ್ರತಿದಾಳಿಗಳನ್ನು ತೀವ್ರಗೊಳಿಸಿದ್ದು, ಇಸ್ರೇಲ್ ಜೊತೆಗೆ ಇತರೆ ಮುಸ್ಲಿಂ ರಾಷ್ಟ್ರಗಳಲ್ಲಿರುವ ಅಮೆರಿಕದ ಸೈನಿಕ ನೆಲೆಗಳನ್ನು ಗುರಿಯಾಗಿಸಿಕೊಂಡಿದೆ.










