ಮಂಗಳೂರು, ಮಾ.4 : ನಿಟ್ಟೆ ಉಷಾ ನರ್ಸಿಂಗ್ ಸೈನ್ಸಸ್ ಸಂಸ್ಥೆಯು ತನ್ನ 33ನೇ ವಾರ್ಷಿಕೋತ್ಸವವನ್ನು ಮಾರ್ಚ್ 6 ಕ್ಕೆ ಕೆಎಸ್ ಹೆಗ್ಡೆ ಮೆಡಿಕಲ್ ಅಕಾಡೆಮಿ ಅಡಿಟೋರಿಯಂನಲ್ಲಿ “ಸಮನ್ವಯ 2026” ಎಂಬ ಶೀರ್ಷಿಕೆಯಲ್ಲಿ ಆಚರಿಸುತ್ತಿದೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಫಾತಿಮಾ ಡಿ ಸಿಲ್ವಾ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನವದೆಹಲಿ ಟೈನ್ ನರ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ ಕಾರ್ಯದರ್ಶಿಯಾದ ಎವ್ಲಿನ್ ಪಿ.ಕಣ್ಣನ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಟ್ಟೆ ಡೀಮ್ಸ್ ಟು ಬಿ ಯುನಿವರ್ಸಿಟಿಯ ತಾಂತ್ರಿಕ ಶಿಕ್ಷಣದ ಉಪಾಧ್ಯಕ್ಷರಾದ ಪ್ರೊ. ಡಾ.ಗೋಪಾಲ್ ಮೊಗರಾಯ ವಹಿಸಲಿದ್ದಾರೆ. ವಾರ್ಷಿಕೋತ್ಸವದ ಪ್ರಯುಕ್ತ ಒಂದು ವಾರಪೂರ್ತಿ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಉಷಾ ನರ್ಸಿಂಗ್ ಸೈನ್ಸಸ್ ಸಂಸ್ಥೆಯ ಪ್ರಮುಖರಾದ ಸಬಿತಾ ನಾಯಕ್ , ಪ್ರತಿಮಾ, ಜೆಸಿಂತಾ ವೇಗಸ್ , ಮಾಳವಿಕಾ ಮತ್ತಿತರರು ಉಪಸ್ಥಿತರಿದ್ದರು.











