ಉಪ್ಪಿನಂಗಡಿ, ಮಾ. 10 : ಬೈಕೊಂದಕ್ಕೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಸಮೀಪದ 34 ನೇ ನೆಕ್ಕಿಲಾಡಿ ಬೊಳ್ಳಾರ್ ಎಂಬಲ್ಲಿ ರವಿವಾರ ನಡೆದಿದೆ.
ಮೃತರನ್ನು ಬಂದಾರು ಗ್ರಾಮದ ಕುರಾಯ ನಿವಾಸಿ,ಪದ್ಮುಂಜ ಸಹಕಾರಿ ಸಂಘದ ಹಿರಿಯ ಗುಮಾಸ್ತ ಚಿದಾನಂದ ಗೌಡ (56) ಎಂದು ಗುರುತಿಸಲಾಗಿದೆ.
ಚಿದಾನಂದ ಗೌಡ ಅವರು ಕಾರ್ಯನಿಮಿತ್ತ ಬೈಕ್ ನಲ್ಲಿ ಸಂಚರಿಸುತ್ತಿದ್ದಾಗ ಬೊಳ್ಳಾರ್ ಎಂಬಲ್ಲಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ , ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಪುತ್ತೂರು ಸಂಚಾರಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











