ಬೆಳ್ತಂಗಡಿ, ಮಾ. 13 : ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಬೆಳ್ತಂಗಡಿಯ ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿರಾಡಿ ಘಾಟಿನ ಗುಂಡ್ಯ ಸಮೀಪ ಶುಕ್ರವಾರ ನಡೆದಿದೆ. ಘಟನೆಯಲ್ಲಿ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಧರ್ಮದಕಳ ನಿವಾಸಿ ಚಂದ್ರಶೇಖರ ಗೌಡ, ಶ್ರೀಧರ್ ಮರಕಡ, ಜನಾರ್ದನ ಕೆರಿಮಾರ್ ಸಾವನ್ನಪ್ಪಿದ್ದು ಸುರೇಶ್ ಎಂಬವರು ಗಂಭೀರವಾಗಿ ಗಾಯಗೊಂಡ ದ್ದು ಗಾಯಾಳುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಈ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.











