ಸುಳ್ಯ, ಮಾ. 25 : ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿಯಾಗಿ ಮೆಸ್ಕಾಂನಲ್ಲಿ ಗುತ್ತಿಗೆ ಆಧಾರದ ಮೇಲೆ ಮೀಟರ್ ರೀಡರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ನಿಂತಿಕಲ್ಲು ಬಳಿ ನಡೆದಿದೆ.
ಮೃತರನ್ನು ಲೋಕನಾಥ (35) ಎಂದು ಗುರುತಿಸಲಾಗಿದೆ.
ಲೋಕನಾಥ ಅವರು ಸುಳ್ಯದಿಂದ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಬೈಕ್ ನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು,ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.











