Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶ ಮುಹೂರ್ತ ಮತ್ತು ಲಾಂಛನ ಬಿಡುಗಡೆ

    April 13, 2026

    ಮಂಗಳೂರು: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಢಿಕ್ಕಿ- ಸವಾರ ಸಾವು

    April 12, 2026

    “90 ಎಮ್ ಎಲ್” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ

    April 11, 2026

    Subscribe to Updates

    Get the latest creative news from FooBar about art, design and business.

    What's Hot

    ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶ ಮುಹೂರ್ತ ಮತ್ತು ಲಾಂಛನ ಬಿಡುಗಡೆ

    April 13, 2026

    ಮಂಗಳೂರು: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಢಿಕ್ಕಿ- ಸವಾರ ಸಾವು

    April 12, 2026

    “90 ಎಮ್ ಎಲ್” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ

    April 11, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಎಂಸಿಸಿ ಬ್ಯಾಂಕಿಗೆ 2025-26 ವಿತ್ತೀಯ ವರ್ಷದಲ್ಲಿ ರೂ. 13 ಕೋಟಿ ಲಾಭ – ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ
    Local News

    ಎಂಸಿಸಿ ಬ್ಯಾಂಕಿಗೆ 2025-26 ವಿತ್ತೀಯ ವರ್ಷದಲ್ಲಿ ರೂ. 13 ಕೋಟಿ ಲಾಭ – ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ

    adminBy adminApril 7, 2026
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು,ಏ. 07 : ಎಂಸಿಸಿ ಬ್ಯಾಂಕ್ 2025-26ನೇ ಆರ್ಥಿಕ ವರ್ಷದಲ್ಲಿ ಉತ್ತಮ ಸಾಧನೆ ಮಾಡಿದ್ದು, 2026ರ ಮಾರ್ಚ್ 31ಕ್ಕೆ ಅಂತ್ಯಗೊಂಡ ಆರ್ಥಿಕ ವರ್ಷದಲ್ಲಿ 13 ಕೋಟಿ ರೂ. ಲಾಭ ಗಳಿಸಿದೆ. ಬ್ಯಾಂಕ್ ನ ಒಟ್ಟು ವ್ಯವಹಾರ 1,525 ಕೋಟಿ ರೂ.ಗೆ ತಲುಪಿದ್ದು, 23 ಶೇ. ವೃದ್ಧಿಸಿದೆ ಎಂದು ಬ್ಯಾಂಕ್ ನ ಅಧ್ಯಕ್ಷ ಅನಿಲ್ ಲೋಬೊ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು , ನಿವ್ವಳ ಎನ್ಪಿಎ (Net NPA) ಇಳಿಕೆಗೆ ನಿರಂತರ ಪ್ರಯತ್ನ ನಡೆಸಿ, ಅದನ್ನು ಒಟ್ಟು ಮುಂಗಡಗಳ 1.25% ಮಟ್ಟಕ್ಕೆ ತಗ್ಗಿಸಲು ಯಶಸ್ವಿಯಾಗಿದೆ. ಒಟ್ಟು ವ್ಯವಹಾರ ರೂ.1525 ಕೋಟಿಗೆ ತಲುಪಿದ್ದು, 23% ವೃದ್ಧಿ ಸಾಧಿಸಿದೆ. 2018ನೇ ವರ್ಷದಲ್ಲಿ ಬ್ಯಾಂಕಿನ ಚುಕ್ಕಾಣಿ ಹಿಡಿದ ಪ್ರಸ್ತುತ ಆಡಳಿತ ಮಂಡಳಿಯ ಅವಧಿಯಲ್ಲಿ ರೂ.500 ಕೋಟಿ ಇದ್ದ ಬ್ಯಾಂಕಿನ ಒಟ್ಟು ವ್ಯವಹಾರವು ಕಳೆದ ಏಳೂವರೆ ವರ್ಷದಲ್ಲಿ ಮೂರು ಪಟ್ಟು ಹೆಚ್ಚಾಗಿದೆ ಎಂದು ಹೇಳಿದರು.

    ಬ್ಯಾಂಕಿನ ನಿವ್ವಳ ಲಾಭ ರೂ.83.76 ಕೋಟಿಯಿಂದ ರೂ.91.80 ಕೋಟಿಗೆ ಏರಿಕೆಯಾಗಿದೆ. ಬ್ಯಾಂಕ್ ಆರ್ಥಿಕ ವರ್ಷದಲ್ಲಿ ನಿಗದಿಪಡಿಸಿದ್ದ ಠೇವಣಿಗಳು ಹಾಗೂ ಸಾಲಗಳ ಗುರಿಗಳನ್ನು ಯಶಸ್ವಿಯಾಗಿ ಸಾಧಿಸಿದೆ. ಆರ್ಥಿಕ ವರ್ಷದಲ್ಲಿ ಬ್ಯಾಂಕ್ ರೂ.285 ಕೋಟಿಗಳ ಒಟ್ಟು ವ್ಯವಹಾರ ವಹಿವಾಟನ್ನು ದಾಖಲಿಸಿದೆ ಎಂದರು.

    ಪ್ರಾರಂಭದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಎಂಬ ಕರಾವಳಿ ಜಿಲ್ಲೆಗಳಲ್ಲೇ ಸೇವೆ ನೀಡುತ್ತಿದ್ದ ಬ್ಯಾಂಕ್, ಇದೀಗ ರಾಜ್ಯದಾದ್ಯಂತ ತನ್ನ ಕಾರ್ಯಾಚರಣೆಯನ್ನು ವಿಸ್ತರಿಸಿದೆ. ಪ್ರಸ್ತುತ ಆರ್ಥಿಕ ವರ್ಷದಲ್ಲಿ ಬೈಂದೂರಿನಲ್ಲಿ 20ನೇ ಶಾಖೆ ಹಾಗೂ ಸಂತೆಕಟ್ಟೆಯಲ್ಲಿ 21ನೇ ಶಾಖೆಯನ್ನು ಆರಂಭಿಸಿದೆ. ಕುಲಶೇಖರ ಶಾಖೆಯನ್ನು ಸ್ವಂತ ಕಟ್ಟಡಕ್ಕೆ ಸುಸಜ್ಜಿತ ಸೌಲಭ್ಯದೊಂದಿಗೆ ಸ್ಥಳಾಂತರಿಸಲಾಗಿದೆ. ಬೆಳ್ಮಣ್, ಸುರತ್ಕಲ್, ಉಡುಪಿ, ಬೆಳ್ತಂಗಡಿ, ಸಂತೆಕಟ್ಟೆ, ಕಿನ್ನಿಗೋಳಿ ಹಾಗೂ ಕುಲಶೇಖರದಲ್ಲಿ ಹೊಸ 7 ಏಟಿಎಮ್ಗಳನ್ನು ಸ್ಥಾಪಿಸಲಾಗಿದೆ. ಹೀಗೆ ಎಟಿಎಮ್ಗಳ ಸಂಖ್ಯೆ 15ಕ್ಕೆ ಏರಿದೆ ಎಂದು ಹೇಳಿದರು.

    2026-27ನೇ ವರ್ಷದಲ್ಲಿ 4 ಹೊಸ ಶಾಖೆಗಳನ್ನು ತೆರೆಯಲು ಯೋಜನೆ ಹಾಕಲಾಗಿದ್ದು, ಶಾಖೆಗಳ ಸಂಖ್ಯೆಗಳು 25ಕ್ಕೆ ಏರಲಿವೆ. ಈಗಾಗಲೇ 22ನೇ ಶಾಖೆಯನ್ನು ದೇರಳಕಟ್ಟೆಯಲ್ಲಿ ಮತ್ತು 23ನೇ ಶಾಖೆಯನ್ನು ಕಟಪಾಡಿಯಲ್ಲಿ ತೆರೆಯಲು ಅನುಮತಿ ಸಿಕ್ಕಿರುತ್ತದೆ ಎಂದರು.

    2025–26 ಆರ್ಥಿಕ ವರ್ಷದಲ್ಲಿ ಬ್ಯಾಂಕ್ ರೂ.13 ಕೋಟಿ ತೆರಿಗೆ ಪೂರ್ವ ಲಾಭ ದಾಖಲಿಸಿದ್ದು, ರೂ.872.88 ಕೋಟಿ ಠೇವಣಿಗಳನ್ನು ಹೊಂದಿದ್ದು, ಕಳೆದ ವರ್ಷದ ಹೋಲಿಕೆಯಲ್ಲಿ 23.74% ಏರಿಕೆ ಕಂಡಿದೆ. ರೂ.652.06 ಕೋಟಿ ಸಾಲ ನೀಡಿದ್ದು, 21.79% ವೃದ್ಧಿ ಸಾಧಿಸಿದೆ. ದುಡಿಯುವ ಬಂಡವಾಳ ರೂ.1008.97 ಕೋಟಿ (21.52% ವೃದ್ಧಿ) ಮತ್ತು ಷೇರು ಬಂಡವಾಳ ರೂ.34.08 ಕೋಟಿ ಆಗಿದೆ. ಒಟ್ಟು ಎನ್ಪಿಎ ಪ್ರೊವಿಷನ್ ಕವರೆಜ್ ಅನುಪಾತ 68.87% ಆಗಿದೆ. ಬ್ಯಾಂಕಿನ ಸಿಆರ್ಎಆರ್ (CRAR) 31 ಮಾರ್ಚ್ 2026ರ ವೇಳೆಗೆ 17% ಆಗಿದ್ದು, ನಿಗದಿಪಡಿಸಿದ 12.00% ಮಾನದಂಡಕ್ಕಿಂತ ಹೆಚ್ಚಾಗಿದೆ. 31 ಮಾರ್ಚ್ 2026ರ ವೇಳೆಗೆ ಬ್ಯಾಂಕಿನ ಒಟ್ಟು ವ್ಯವಹಾರ ರೂ.1525 ಕೋಟಿಗೆ ಏರಿಕೆಯಾಗಿದೆ ಎಂದು ಹೇಳಿದರು.

    ಜೂನ್ ಅಂತ್ಯದೊಳಗೆ ದೇರಳಕಟ್ಟೆ (ದಕ್ಷಿಣ ಕನ್ನಡ ಜಿಲ್ಲೆ) ಯಲ್ಲಿ 22ನೇ ಶಾಖೆ ಆರಂಭ,ಮಂಗಳೂರು (ಮೋರ್ಗನ್ಗೇಟ್) ಶಾಖೆಯನ್ನು ಜುಲೈ ಅಂತ್ಯದೊಳಗೆ ಸ್ಥಳಾಂತರ,ಆಗಸ್ಟ್ ಮೊದಲ ವಾರದಲ್ಲಿ ಕಟಪಾಡಿ (ಉಡುಪಿ ಜಿಲ್ಲೆ) ಯಲ್ಲಿ 23ನೇ ಶಾಖೆ ಆರಂಭ, ಕಾರ್ಕಳ ಶಾಖೆಯನ್ನು ಆಗಸ್ಟ್ ಅಂತ್ಯದೊಳಗೆ ಸ್ವಂತ ಕಟ್ಟಡಕ್ಕೆ ಸ್ಥಳಾಂತರ,ಮೂಡಬಿದ್ರೆ ಶಾಖೆಯನ್ನು ಆಗಸ್ಟ್ ಅಂತ್ಯದೊಳಗೆ ನೆಲ ಮಹಡಿಗೆ ಸ್ಥಳಾಂತರ,ಮಾರ್ಚ್ ಅಂತ್ಯದೊಳಗೆ ವಾಮಂಜೂರಿನಲ್ಲಿ 24ನೇ ಶಾಖೆ ಆರಂಭ,ಮಾರ್ಚ್ ಅಂತ್ಯದೊಳಗೆ ಮಂಗಳೂರಿನಲ್ಲಿ ಸಿಲ್ವರ್ ಶಾಖೆ (25ನೇ ಶಾಖೆ) ಆರಂಭ
    8. 3 ನಗದು ಠೇವಣಿ ಮತ್ತು ವಿತರಣೆ (Cash Deposit and Dispenser) ಎಟಿಎಂ ಯಂತ್ರಗಳ ಸ್ಥಾಪನೆ ಇಬು ಮುಂದಿನ ಯೋಜನೆಗಳಾಗಿವೆ ಎಂದರು.

    ಬ್ಯಾಂಕ್ ವಿವಿಧ ಹಣಕಾಸು ಉತ್ಪನ್ನಗಳನ್ನು ಒದಗಿಸುತ್ತಿದ್ದು, ಕಡಿಮೆ ದರದಲ್ಲಿ ಲಾಕರ್ ಸೌಲಭ್ಯ, ದೇಶೀಯ ಹಾಗೂ ವಿದೇಶಿ ಶಿಕ್ಷಣ ಸಾಲಗಳು, ಎಂಎಸ್ಎಂಇ ಸಾಲಗಳು, ವಾಹನ ಸಾಲಗಳು, ಗೃಹ ಸಾಲಗಳು, ಮನೆ ದುರಸ್ತಿ, ಮದುವೆ ಮತ್ತು ಗೃಹೋಪಯೋಗಿ ವಸ್ತುಗಳ ಖರೀದಿಗೆ ಸಾಲಗಳನ್ನು ನೀಡುತ್ತದೆ. ಎಟಿಎಂ ಮತ್ತು ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಉಚಿತವಾಗಿ ಲಭ್ಯವಿವೆ ಎಂದು ಹೇಳಿದರು.

    ಬ್ಯಾಂಕಿನಲ್ಲಿನ ಠೇವಣಿಗಳು ಭಾರತೀಯ ರಿಸರ್ವ್ ಬ್ಯಾಂಕ್ ಮಾರ್ಗಸೂಚಿಗಳಂತೆ ಡಿಪಾಸಿಟ್ ಇನ್ಸುರೆನ್ಸ್ ಅಂಡ್ ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇರ್ಷನ್ (DICGC) ಮೂಲಕ ವಿಮೆಗೊಳಿಸಲಾಗಿದೆ ಎಂದರು.

    ಈ ಸಾಧನೆಗೆ ಸದಸ್ಯರು ಮತ್ತು ಗ್ರಾಹಕರ ವಿಶ್ವಾಸ, ಸಿಬ್ಬಂದಿಯ ಸಮರ್ಪಿತ ಸೇವೆಯೇ ಪ್ರಮುಖ ಕಾರಣವಾಗಿದೆ. ಮುಂದಿನ ಆರ್ಥಿಕ ವರ್ಷದಲ್ಲಿಯೂ ಇದೇ ರೀತಿಯ ಬೆಂಬಲದೊಂದಿಗೆ ಇನ್ನಷ್ಟು ಸಾಧನೆಗಳನ್ನು ಮಾಡುವತ್ತ ಬ್ಯಾಂಕ್ ನಿರೀಕ್ಷೆ ಹೊಂದಿದೆ ಎಂದು ಹೇಳಿದರು.

    ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷರಾದ ಜೆರಾಲ್ಡ್ ಜೂಡ್ ಡಿಸಿಲ್ವ ನಿರ್ದೇಶಕರಾದ – ಆಂಡ್ರೂ ಡಿಸೊಜಾ, ಡಾ| ಜೆರಾಲ್ಡ್ ಪಿಂಟೊ, ಅನಿಲ್ ಪತ್ರಾವೊ, ಜೆ.ಪಿ. ರೊಡ್ರಿಗಸ್, ಡೇವಿಡ್ ಡಿಸೊಜಾ, ಎಲ್ರೊಯ್ ಕಿರಣ್ ಕ್ರಾಸ್ಟೊ, ಹೆರಾಲ್ಡ್ ಮೊಂತೇರೊ, ರೋಶನ್ ಡಿಸೊಜಾ, ಮೆಲ್ವಿನ್ ವಾಸ್, ವಿನ್ಸೆಂಟ್ ಲಸ್ರಾದೊ, ಸಿ.ಜಿ. ಪಿಂಟೊ, ಸುಶಾಂತ್ ಸಲ್ಡಾನ್ಹಾ, ಐರಿನ್ ರೆಬೆಲ್ಲೊ, ಡಾ| ಫ್ರೀಡಾ ಡಿಸೊಜಾ, ಆಲ್ವಿನ್ ಪಿ. ಮೊಂತೆರೊ, ಫೆಲಿಕ್ಸ್ ಡಿಕ್ರೂಜ್, ಶರ್ಮಿಳಾ ಮಿನೇಜಸ್ ಹಾಗೂ ಮಹಾ ಪ್ರಬಂದಕರು – ಸುನಿಲ್ ಮಿನೇಜಸ್ ಉಪಸ್ಥಿತರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News April 13, 2026

    ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶ ಮುಹೂರ್ತ ಮತ್ತು ಲಾಂಛನ ಬಿಡುಗಡೆ

    Local News April 12, 2026

    ಮಂಗಳೂರು: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಢಿಕ್ಕಿ- ಸವಾರ ಸಾವು

    Local News April 10, 2026

    ಮಂಗಳೂರಿನ ಪುರಭವನದಲ್ಲಿ ಏಪ್ರಿಲ್ 12 ರಂದು ಬಂಟರ ಯಾನೆ ನಾಡವರ ಮಾತೃ ಸಂಘದ ಬಹಿರಂಗ ಅಧಿವೇಶನ, ಸಾಧಕರಿಗೆ ಪ್ರಶಸ್ತಿ ಪ್ರದಾನ

    Local News April 8, 2026

    ಏ.10 : ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶದ ಮುಹೂರ್ತ ಮತ್ತು ಲಾಂಛನ ಬಿಡುಗಡೆ

    Local News April 6, 2026

    ಪಿ ಎ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಂದ ಮೊಂಟೆಪದವ್ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ

    Local News April 5, 2026

    ಕರಾವಳಿಯಲ್ಲಿ ಸಂಭ್ರಮದ ಈಸ್ಟರ್ ಹಬ್ಬ ಆಚರಣೆ

    Comments are closed.

    Demo
    Don't Miss
    Local News April 13, 2026

    ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶ ಮುಹೂರ್ತ ಮತ್ತು ಲಾಂಛನ ಬಿಡುಗಡೆ

    ಮಂಗಳೂರು,ಏ. 13 : ತನ್ನ ಅಸ್ತಿತ್ವದ ನಲ್ವತ್ತನೇ ವರ್ಷಾಚರಣೆ ಸಂಭ್ರಮದಲ್ಲಿರುವ ಕೊಂಕಣಿಯ ಪ್ರಮುಖ ಸಾಂಸ್ಕೃತಿಕ ಸಂಘಟನೆ ಮಾಂಡ್ ಸೊಭಾಣ್ ಇದೇ…

    ಮಂಗಳೂರು: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಢಿಕ್ಕಿ- ಸವಾರ ಸಾವು

    April 12, 2026

    “90 ಎಮ್ ಎಲ್” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ

    April 11, 2026

    ಮಂಗಳೂರಿನ ಪುರಭವನದಲ್ಲಿ ಏಪ್ರಿಲ್ 12 ರಂದು ಬಂಟರ ಯಾನೆ ನಾಡವರ ಮಾತೃ ಸಂಘದ ಬಹಿರಂಗ ಅಧಿವೇಶನ, ಸಾಧಕರಿಗೆ ಪ್ರಶಸ್ತಿ ಪ್ರದಾನ

    April 10, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.