Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಕೊಡಿಯಾಲ್‌ಬೈಲ್ ವಾರ್ಡಿನ ಕದ್ರಿಗುಡ್ಡೆ ಬಳಿಯ ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

    May 25, 2026

    ಎಂ.ಸಿ.ಸಿ. ಬ್ಯಾಂಕಿಗೆ ಇಥಿಯೋಪಿಯಾದ ಡ್ಯಾಶೆನ್ ಬ್ಯಾಂಕ್ ಎಸ್.ಸಿ. ಇದರ ಆಡಳಿತ ಮಂಡಳಿಯ ನಿರ್ದೇಶಕರ ಭೇಟಿ

    May 24, 2026

    ಮಂಗಳೂರು : ವಿಕಾಸ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷ ಕೃಷ್ಣ ಜೆ. ಪಾಲೆಮಾರ್ ಅವರ ನೇತೃತ್ವದಲ್ಲಿ ನಿರ್ಮಾಣಗೊಂಡಿರುವ ನಾಲ್ಕು ಅತ್ಯಾಧುನಿಕ ಸಭಾಭವನ ಉದ್ಘಾಟನೆ

    May 23, 2026

    Subscribe to Updates

    Get the latest creative news from FooBar about art, design and business.

    What's Hot

    ಕೊಡಿಯಾಲ್‌ಬೈಲ್ ವಾರ್ಡಿನ ಕದ್ರಿಗುಡ್ಡೆ ಬಳಿಯ ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

    May 25, 2026

    ಎಂ.ಸಿ.ಸಿ. ಬ್ಯಾಂಕಿಗೆ ಇಥಿಯೋಪಿಯಾದ ಡ್ಯಾಶೆನ್ ಬ್ಯಾಂಕ್ ಎಸ್.ಸಿ. ಇದರ ಆಡಳಿತ ಮಂಡಳಿಯ ನಿರ್ದೇಶಕರ ಭೇಟಿ

    May 24, 2026

    ಮಂಗಳೂರು : ವಿಕಾಸ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷ ಕೃಷ್ಣ ಜೆ. ಪಾಲೆಮಾರ್ ಅವರ ನೇತೃತ್ವದಲ್ಲಿ ನಿರ್ಮಾಣಗೊಂಡಿರುವ ನಾಲ್ಕು ಅತ್ಯಾಧುನಿಕ ಸಭಾಭವನ ಉದ್ಘಾಟನೆ

    May 23, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ಏ.10 : ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶದ ಮುಹೂರ್ತ ಮತ್ತು ಲಾಂಛನ ಬಿಡುಗಡೆ
    Local News

    ಏ.10 : ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶದ ಮುಹೂರ್ತ ಮತ್ತು ಲಾಂಛನ ಬಿಡುಗಡೆ

    adminBy adminApril 8, 2026
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು,ಏ. 08 :  ನಲ್ವತ್ತನೇ ವರ್ಷಾಚರಣೆ ಸಂಭ್ರಮದಲ್ಲಿರುವ ಕೊಂಕಣಿಯ ಪ್ರಮುಖ ಸಾಂಸ್ಕೃತಿಕ ಸಂಘಟನೆ ಮಾಂಡ್ ಸೊಭಾಣ್ ತನ್ನ ಧ್ಯೇಯೋದ್ದೇಶಗಳಿಗೆ ಪೂರಕವಾಗಿ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶವನ್ನು ಆಯೋಜಿಸುತ್ತಿದೆ. ನವೆಂಬರ್ 03 –15 ರವರೆಗೆ ಮಂಗಳೂರಿನಲ್ಲಿ ನಡೆಯುವ ಈ ಬೃಹತ್ ಕಾರ್ಯಕ್ರಮದ ಮುಹೂರ್ತ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮವು ಏ.10, ಶುಕ್ರವಾರ ಶಕ್ತಿನಗರದ ಕಲಾಂಗಣದಲ್ಲಿ ಸಂಜೆ 4.00 ಗಂಟೆಗೆ ನೆರವೇರಲಿದೆ ಎಂದು ಮಾಂಡ್ ಸೊಭಾಣ್ ಇದರ ಅಧ್ಯಕ್ಷರು ಲುವಿ ಜೆ ಪಿಂಟೊ ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು,ಕರ್ನಾಟಕ ಸರಕಾರದ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಮಂತ್ರಿ ದಿನೇಶ್ ಗುಂಡೂರಾವ್ ಲಾಂಛನ ಬಿಡುಗಡೆಗೊಳಿಸುವರು. ಗೌರವ ಅತಿಥಿಗಳಾಗಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹಾಗೂ ಗೋವಾದ ಕಲಾವಿದ ಮೈಕಲ್ ಗ್ರೇಶಿಯಸ್ ಗೌರವ ಅತಿಥಿಗಳಾಗಿ ಉಪಸ್ಥಿತರಿರುವರು ಎಂದರು.

    ಈ ಸಂಗೀತ ಮಹಾ ಸಮಾವೇಶದಲ್ಲಿ 12 ದಿನ, 12 ಗಂಟೆ, 12 ನಿಮಿಷಗಳ, ಸಮೂಹ ಗಾಯನದ ಅತೀ ದೀರ್ಘ ಸಮಯದ ಗಿನ್ನೆಸ್ ದಾಖಲೆ ರಚಿಸಲು ಪ್ರಯತ್ನಿಸಲಾಗುವುದು. ಈ ಪ್ರಯತ್ನದಲ್ಲಿ ಕರ್ನಾಟಕ, ಗೋವಾ, ಮಹಾರಾಷ್ಟ್ರ, ಕೇರಳ ಮತ್ತಿತರ ರಾಜ್ಯಗಳಿಂದಲೂ ಹಾಗೂ ವಿದೇಶಗಳಿಂದಲೂ 6000 ಕ್ಕೂ ಮಿಕ್ಕಿ ಹಾಡುಗಾರರು ಭಾಗವಹಿಸಲಿದ್ದಾರೆ. ಈ ದಾಖಲೆಯಲ್ಲಿ ಕ್ರೈಸ್ತ, ಜಿಎಸ್‌ಬಿ, ದಾಲ್ದಿ, ಕುಡ್ಮಿ, ಖಾರ್ವಿ, ಸಿದ್ದಿ, ಸಿರಿಯನ್ ಆರ್ಥೊಡಾಕ್ಸ್ ಮತ್ತಿತರ ಸಮುದಾಯಗಳ ಗಾಯಕರು ಸುಮಾರು 5000 ಕೊಂಕಣಿ ಹಾಡುಗಳನ್ನು ಹಾಡಲಿದ್ದಾರೆ. ಆ ದಿನಗಳಲ್ಲಿ ಸಂಗೀತಕ್ಕೆ ಸಂಬಂಧಪಟ್ಟ ವಿವಿಧ ಸಂವಾದ ಗೋಷ್ಟಿಗಳನ್ನು ಆಯೋಜಿಸಲಾಗುವುದು. ಸಂಗೀತದಲ್ಲಿ ಮಹತ್ತರ ಸಾಧನೆಗೈದ ಹಿರಿಯರನ್ನು ಸಮ್ಮಾನಿಸಲಾಗುವುದು, ಕೀರ್ತಿ ಮಂದಿರ ಹಾಗೂ ಸಂಗೀತ ಮತ್ತು ಸಂಸ್ಕೃತಿಗೆ ಸಂಬಂಧಪಟ್ಟ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗುವುದು. ಕೊಂಕಣಿ ಸಂಗೀತಕ್ಕೆ ಮಹೋನ್ನತ ಕೊಡುಗೆ ನೀಡಿದ ಎರಿಕ್ ಒಝೇರಿಯೊ ಅವರಿಗೆ ಅರ್ಪಣೆಯಾಗಿ ಈ ಕಾರ್ಯಕ್ರಮವನ್ನು ನಡೆಯಲಿದೆ ಎಂದು ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಕಲಾಂಗಣ್ ಪಿರ್ಜೆಂತ್ ರೊಯ್ ಕ್ಯಾಸ್ತೆಲಿನೊ, ಪ್ರ.ವಿ.ಕೊಂ.ಸಂ.ಮಾ.ಸ. ಸಂಗೀತ ನಿರ್ದೇಶಕರು ಜೊಯೆಲ್ ಪಿರೇರಾ, ಮಾಂಡ್ ಸೊಭಾಣ್ ಸಂಘಟಕರು ಸ್ಟ್ಯಾನಿ ಆಲ್ವಾರಿಸ್, ಮಾಂಡ್ ಸೊಭಾಣ್ ಉಪಾಧ್ಯಕ್ಷರು ನವೀನ್ ಲೋಬೊ, ಮಾಂಡ್ ಸೊಭಾಣ್ ಕಾರ್ಯದರ್ಶಿ ರೊನಾಲ್ಡ್ ಕ್ರಾಸ್ತಾ ಪತ್ರಿಕಾ ಗೋಷ್ಟಿಯಲ್ಲಿ ಹಾಜರಿದ್ದರು.

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News May 25, 2026

    ಕೊಡಿಯಾಲ್‌ಬೈಲ್ ವಾರ್ಡಿನ ಕದ್ರಿಗುಡ್ಡೆ ಬಳಿಯ ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

    Local News May 24, 2026

    ಎಂ.ಸಿ.ಸಿ. ಬ್ಯಾಂಕಿಗೆ ಇಥಿಯೋಪಿಯಾದ ಡ್ಯಾಶೆನ್ ಬ್ಯಾಂಕ್ ಎಸ್.ಸಿ. ಇದರ ಆಡಳಿತ ಮಂಡಳಿಯ ನಿರ್ದೇಶಕರ ಭೇಟಿ

    Local News May 23, 2026

    ಮಂಗಳೂರು : ವಿಕಾಸ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷ ಕೃಷ್ಣ ಜೆ. ಪಾಲೆಮಾರ್ ಅವರ ನೇತೃತ್ವದಲ್ಲಿ ನಿರ್ಮಾಣಗೊಂಡಿರುವ ನಾಲ್ಕು ಅತ್ಯಾಧುನಿಕ ಸಭಾಭವನ ಉದ್ಘಾಟನೆ

    Local News May 22, 2026

    ಮೇ 24 : ಸ್ಯಾಂಡಿಸ್ ಕಂಪೆನಿಯಿಂದ ಸಿನಿ ಗ್ಯಾಲಕ್ಸಿ ಕೋಸ್ಟಲ್ ಫಿಲಂ ಅವಾರ್ಡ್ಸ್ 2026 ಪ್ರದಾನ ಕಾರ್ಯಕ್ರಮ

    Local News May 21, 2026

    ಮೇ 23 ರಂದು ಮಂಗಳೂರಿನಲ್ಲಿ ನಾಲ್ಕು ಅದ್ದೂರಿ ಸಭಾಭವನಗಳ ಲೋಕಾರ್ಪಣೆ – ಕೃಷ್ಣ ಪಾಲೆಮಾರ್

    Local News May 20, 2026

    ಮೇ 24 : ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ

    Comments are closed.

    Demo
    Don't Miss
    Local News May 25, 2026

    ಕೊಡಿಯಾಲ್‌ಬೈಲ್ ವಾರ್ಡಿನ ಕದ್ರಿಗುಡ್ಡೆ ಬಳಿಯ ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

    ಮಂಗಳೂರು,ಮೇ.25  : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 30ನೇ ಕೊಡಿಯಾಲ್‌ಬೈಲ್ ವಾರ್ಡಿನ ಕದ್ರಿಗುಡ್ಡೆ ಬಳಿ ಲೋಕೋಪಯೋಗಿ ಇಲಾಖೆಯಿಂದ 30 ಲಕ್ಷ…

    ಎಂ.ಸಿ.ಸಿ. ಬ್ಯಾಂಕಿಗೆ ಇಥಿಯೋಪಿಯಾದ ಡ್ಯಾಶೆನ್ ಬ್ಯಾಂಕ್ ಎಸ್.ಸಿ. ಇದರ ಆಡಳಿತ ಮಂಡಳಿಯ ನಿರ್ದೇಶಕರ ಭೇಟಿ

    May 24, 2026

    ಮಂಗಳೂರು : ವಿಕಾಸ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷ ಕೃಷ್ಣ ಜೆ. ಪಾಲೆಮಾರ್ ಅವರ ನೇತೃತ್ವದಲ್ಲಿ ನಿರ್ಮಾಣಗೊಂಡಿರುವ ನಾಲ್ಕು ಅತ್ಯಾಧುನಿಕ ಸಭಾಭವನ ಉದ್ಘಾಟನೆ

    May 23, 2026

    ಮೇ 24 : ಸ್ಯಾಂಡಿಸ್ ಕಂಪೆನಿಯಿಂದ ಸಿನಿ ಗ್ಯಾಲಕ್ಸಿ ಕೋಸ್ಟಲ್ ಫಿಲಂ ಅವಾರ್ಡ್ಸ್ 2026 ಪ್ರದಾನ ಕಾರ್ಯಕ್ರಮ

    May 22, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.