ಮಂಗಳೂರು, ಏ. 11 : ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ ಬಜಾಲ್ ನಿರ್ದೇಶನದಲ್ಲಿ ಡೋಲ್ಪಿ ಡಿ ಸೋಜ ನಿರ್ಮಾಣದಲ್ಲಿ ತಯಾರಾದ “90 ಎಮ್ ಎಲ್” ತುಳು ಚಲನ ಚಿತ್ರ ಶುಕ್ರವಾರ ಭಾರತ್ ಸಿನಿಮಾಸ್ ನಲ್ಲಿ ತೆರೆ ಕಂಡಿತು.
ದೀಪ ಬೆಳಗಿಸುವ ಮೂಲಕ ಸಿನಿಮಾ ಉದ್ಘಾಟನೆ ನೆರವೇರಿಸಿ ಮಾತಾಡಿದ ಬೆಂಜನಪದವು ಕೊರಗಜ್ಜ ಕ್ಷೇತ್ರದ ವಿಜಯ ಅವರು ಇಂದು ಬಿಡುಗಡೆಯಾಗುತ್ತಿರುವ 90 ಎಂಎಲ್ ಸಿನಿಮಾಕ್ಕೆ ಹಾಗೆನೇ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದರು.
ನಟ ಅರ್ಜುನ್ ದೇವ್ ಮಾತಾಡಿ, 90 ಎಂ ಎಲ್ ಚಿತ್ರಕ್ಕೆ ಯಶಸ್ಸು ಸಿಗಲಿ ಎಂದರು. ಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್, ಲಾಂಚುಲಾಲ್ ಕೆ.ಎಸ್. ಚಿತ್ರಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ನಿರ್ಮಾಪಕ ಡೋಲ್ಪಿ ಡಿ ಸೋಜ, ಸ್ವರಾಜ್ ಶೆಟ್ಟಿ, ಸಿದ್ಧಾರ್ಥ್, ತ್ರಿಶೂಲ್ ಶೆಟ್ಟಿ, ಆನಂದ್ ಕುಂಪಲ, ಜಗನ್ನಾಥ ಶೆಟ್ಟಿ ಬಾಳ, ಮೋಹನ್ ಕೊಪ್ಪಲ, ವಿನೀತ್ ಕುಮಾರ್, ರುಹಾನಿ ಶೆಟ್ಟಿ, ರೋಶನ್ ಶೆಟ್ಟಿ, ಶೈಲಶ್ರೀ, ಧೃತಿ, ನಿರ್ದೇಶಕ ರಂಜಿತ್ ಸಿ ಬಜಾಲ್, ತುಳಸಿದಾಸ್ ಮಂಜೇಶ್ವರ್ ಮತ್ತಿತರರು ಉಪಸ್ಥಿತರಿದ್ದರು. ವಿಜೆ ಮಧುರಾಜ್ ಕಾರ್ಯಕ್ರಮ ನಿರೂಪಿಸಿದರು.
90 ಎಂಎಲ್ ಸಿನಿಮಾ ಮಂಗಳೂರು, ಉಡುಪಿ, ಪುತ್ತೂರು, ಬೆಳ್ತಂಗಡಿ, ಪಡುಬಿದ್ರೆ, ಸುರತ್ಕಲ್, ಕಾರ್ಕಳ, ದೇರಳಕಟ್ಟೆಯಲ್ಲಿ ಬಿಡುಗಡೆಗೊಂಡಿದೆ. ಈ ಸಿನಿಮಾದಲ್ಲಿ ವಿನೀತ್ ಕುಮಾರ್, ರುಹಾನಿ ಶೆಟ್ಟಿ , ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ರೋಶನ್ ಶೆಟ್ಟಿ, ಉಮೇಶ್ ಮಿಜಾರ್, ದೀಪಕ್ ರೈ ಪಾಣಾಜೆ, ಪುಷ್ಪರಾಜ್ ಬೊಳ್ಳಾರು, ನಮಿತ, ಶೈಲಾಶ್ರೀ, ಧೃತಿ ನಟಿಸಿದ್ದಾರೆ.
ಈ ಚಿತ್ರಕ್ಕೆ ಸಂಭಾಷಣೆ ತುಳಸಿದಾಸ್ ಮಂಜೇಶ್ವರ್, ಛಾಯಾಗ್ರಾಹಣ ಅರ್ಜುನ್ ಎಂವಿ, ಸಂಗೀತ ಸೃಜನ್ ಕುಮಾರ್ ತೋನ್ಸೆ, ಸಂಕಲನ ಸಚಿನ್ ರಾಮ್, ಡಿಸೈನ್ ಆಚಾರ್ಯ ಗುರು, ರಂಜಿತ್ ಸಿ ಬಜಾಲ್ ಕಥೆ. ಚಿತ್ರಕಥೆ, ನಿರ್ದೇಶನ ಮಾಡಿದ್ದಾರೆ.











