ಯಾದಗಿರಿ, ಏ. 17 : ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಸಮೀಪ ಕಾರು ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿದೆ.ಕಾರು ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೆಂಕಿ ಹೊತ್ತಿಕೊಂಡು ಆರು ಮಂದಿ ಸಜೀವ ದಹನಗೊಂಡಿದ್ದಾರೆ .
ವರದಿಯ ಪ್ರಕಾರ, ಕಾರು ಯಾದಗಿರಿಯಿಂದ ರಾಯಚೂರು ಕಡೆಗೆ ತೆರಳುತ್ತಿದ್ದು, ಬಸ್ ಬೆಂಗಳೂರು ಕಡೆಯಿಂದ ಕಲಬುರಗಿ ಕಡೆಗೆ ಬರುತ್ತಿದ್ದಸಂದರ್ಭ ದೇವಾಪುರ ಎಂಬಲ್ಲಿ ಅಪಘಾತ ಸಂಭವಿಸಿದೆ. ಡಿಕ್ಕಿಯ ತೀವ್ರತೆಯಿಂದ ಕಾರು ಹಾಗೂ ಬಸ್ಸಿಗೆ ತಕ್ಷಣವೇ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಎಂದು ವರದಿಯಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಘಟನೆಯ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಸುರಪುರ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.











