ನವದೆಹಲಿ, ಮೇ. 03 : ದಿಲ್ಲಿಯ ವಿವೇಕ್ ವಿಹಾರ್ ಪ್ರದೇಶದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಇಂದು ರವಿವಾರ ಮುಂಜಾನೆ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಕಟ್ಟಡದ 2ನೇ ಮಹಡಿಯಲ್ಲಿ ಬೆಳಿಗ್ಗೆ 4 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಬೆಂಕಿ ಕಟ್ಟಡದ ಮೂರನೇ ಮತ್ತು ನಾಲ್ಕನೇ ಮಹಡಿಗೆ ಹರಡಿತ್ತು.
ಕಟ್ಟಡದ 2ನೇ ಮಹಡಿಯಲ್ಲಿ ನಸುಕಿನ 4 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. ನಂತರ 14 ಅಗ್ನಿಶಾಮಕ ದಳದ ವಾಹನಗಳು ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದೆ.
ಸತತ ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಲಾಗಿದ್ದು, ಬೆಳಗ್ಗೆ 6 ಗಂಟೆ ಸುಮಾರಿಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಕಟ್ಟಡದ ಹಲವು ಭಾಗಗಳು ಸುಟ್ಟುಹೋಗಿ, ಮೇಲಿನ ಮಹಡಿಯಿಂದ ಹೊಗೆ ಹೊರಬರುತ್ತಿತ್ತು. ಕಟ್ಟಡದಿಂದ ಹಲವರನ್ನು ರಕ್ಷಿಸಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಗುರು ತೇಜ್ ಬಹದ್ದೂರ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.











