ಮಂಗಳೂರು, ಮೇ. 12: ಮಕ್ಕಳ ಪ್ರತಿಭೆ, ಸೃಜನಶೀಲತೆಯನ್ನು ಉತ್ತೇಜಿಸುವ ಉದ್ದೇಶದಿಂದ ಸ್ಪಾರ್ಕ್ ಟ್ರೀ ವತಿಯಿಂದ ಮೇ 16 ಮತ್ತು 17ರಂದು ನಗರದ ಪಾಲೇಮಾರ್ ಕನ್ವೆನ್ಶನ್ ಸೆಂಟರ್‌ನಲ್ಲಿ ‘ಕಿಡ್‌ಫೆಸ್ಟ್ 2026’ ಎಂಬ ವಿಶೇಷ ಮಕ್ಕಳ ಉತ್ಸವ ಆಯೋಜಿಸಲಾಗಿದೆ ಎಂದು ಸ್ಪಾರ್ಕ್ ಟ್ರೀ ಸಂಸ್ಥೆಯ ಸೌಜನ್ಯ ಹೆಗ್ಡೆ ಅವರು ಸೋಮವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಉತ್ಸವದಲ್ಲಿ ಮಕ್ಕಳಿಗೆ ಕಲಿಕೆ, ಆಟೋಟ, ಸೃಜನಾತ್ಮಕ ಚಟುವಟಿಕೆಗಳು ಹಾಗೂ ವಿವಿಧ ಕಾರ್ಯಾಗಾರಗಳನ್ನು ಒಳಗೊಂಡ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ವಿಶೇಷ ಆಕರ್ಷಣೆಯಾಗಿ ಮೊದಲ ಬಾರಿಗೆ ಮಕ್ಕಳಿಗಾಗಿ ‘ಕಿಡ್ಸ್ ಮ್ಯಾರಥಾನ್’ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರೀತಮ್ ಪೊನ್ನಪ್ಪ ಉಪಸ್ಥಿತರಿದ್ದರು.











