ಬೆಳ್ತಂಗಡಿ, ಮೇ. 18 : ಪಡಂಗಡಿಯ ಕನ್ನಡಿಕಟ್ಟೆ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಬಳಂಜ ಫಾರ್ಮ್ ನ ಮಾಲಕ ಪ್ರಗತಿಪರ ಕೃಷಿಕ ಅನಿಲ್ ಭಟ್) ಅವರ ಪತ್ನಿ ಶೈಲಜಾ (35) ಎಂದು ಗುರುತಿಸಲಾಗಿದೆ
ಅನಿಲ್ ಭಟ್ ಮತ್ತು ಪತ್ನಿ ಶೈಲಜಾ ಅವರು ತಮ್ಮ ಫಾರ್ಮ್ ನ ಕೆಲಸ ಮುಗಿಸಿ ಅವರ ಸೈಟ್ ಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಕನ್ನಡಿಕಟ್ಟೆ ಬಳಿ ಬೈಕ್ ಮತ್ತು ಕಾರು ನಡುವೆ ಢಿಕ್ಕಿ ಸಂಭವಿಸಿ ಶೈಲಜಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಪೋಲಿಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.











