ನವದೆಹಲಿ,ಜೂ. 13 : ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ.
ಧೀರಜ್ ಸೇಠ್ ಅವರು ಜೂನ್ 30 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಹಾಲಿ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಜೂನ್ 30ರಂದು ನಿವೃತ್ತರಾದ ನಂತರ ಧೀರಜ್ ಸೇಠ್ ಅವರು ಭಾರತೀಯ ಸೇನೆಯ ನೂತನ ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.











