ಮಂಗಳೂರು, ಜೂ.29 : ದೇಶದ ಅಭಿವೃದ್ಧಿಗೆ ಸಹಕಾರ ಕ್ಷೇತ್ರವು ಮಹತ್ವದ ಕೊಡುಗೆ ನಿರಂತರವಾಗಿ ನೀಡುತ್ತಾ ಬಂದಿದೆ ಎಂದು ಎಸ್ ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಅವರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿ., ಮಂಗಳೂರು ಸಹಕಾರ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆಇವರ ಸಂಯುಕ್ತ ಆಶ್ರಯ ದಲ್ಲಿ ಕೇಂದ್ರ ಬ್ಯಾಂಕ್ ಸಭಾಂಗಣದಲ್ಲಿ ಸೋಮ ವಾರ ಹಮ್ಮಿಕೊಂಡ ವಿಶೇಷ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಹೇಳಿದರು.
ವಿಶೇಷ ಸಹಕಾರ ಸಪ್ತಾಹ ಕಾರ್ಯಕ್ರಮದ ಅಧ್ಯಕ್ಷ ತೆ ವಹಿಸಿ ಮಾತನಾಡುತ್ತಾ, ರಾಜ್ಯದಲ್ಲಿ 47 ಸಾವಿರಕ್ಕೂ ಅಧಿಕ ಸಹಕಾರಿ ಸಂಘಗಳು ,ದೇಶದಲ್ಲಿ ಮೂವತ್ತು ಕೋಟಿಗೂ ಅಧಿಕ ಮಂದಿ ಸಹಕಾರಿ ಸಂಘದ ಸದಸ್ಯರಿದ್ದಾರೆ.ಸಹಕಾರ ಸಂಘಗಳು ಜನಸಾಮಾನ್ಯರ ಬಳಿಗೆ ಬ್ಯಾಂಕ್ ಸೇವೆಯನ್ನು ನೀಡುತ್ತಿದೆ.ಅವರ ಜೊತೆ ಒಳ್ಳೆಯ ಒಡನಾಟವನ್ನು ಬೆಳೆಸಿಕೊಂಡು ಅವರ ಆರ್ಥಿಕ ಸಂಕಷ್ಟದ ಸಂದರ್ಭದಲ್ಲಿ ಅವರಿಗೆ ನೆರವಾಗಿದೆ ಎಂದರು.
ದಕ್ಷಿಣ ಕನ್ನಡ ಜಿಲ್ಲೆಯ ವಿಶೇಷ ಸಹಕಾರ ಸಪ್ತಾಹದ ಧ್ವಜಾರೋಹಣ ನರವೇರಿಸಿದ ಶಾಸಕ ವೇದವ್ಯಾಸ್ ಡಿ. ಕಾಮತ್ ಮಾತನಾಡಿ, ದೇಶದ ಅಭಿವೃದ್ಧಿಗೆ ಸಹಕಾರ ಕ್ಷೇತ್ರದ ಮಹತ್ವದ ಕೊಡುಗೆ ಇದೆ. ಸಹಕಾರ ಕ್ಷೇತ್ರದ ಮೂಲಕ ಗ್ರಾಹಕರಿಗೆ ಉತ್ತಮ ಸೇವೆ ಸಿಗುವಂತಾಗಲಿ ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇದರ ನಿರ್ದೇಶಕ ಜಯಕರ ಶೆಟ್ಟಿ ಬಿ. ಇಂದ್ರಾಳಿ, ದ.ಕ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಹೆಚ್. ಎನ್. ರಮೇಶ್,ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.ಮಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ, ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ದೇವಿ ಪ್ರಸಾದ್ ಶೆಟ್ಟಿ,ಭಾಸ್ಕರ್ ಎಸ್. ಕೋಟ್ಯಾನ್, ಎಸ್.ಬಿ.ಜಯರಾಮ್ ರೈ, ಜೈರಾಜ್ ಬಿ.ರೈ, ಮೋನಪ್ಪ ಶೆಟ್ಟಿ ಎಕ್ಕಾರು,ವಾದಿರಾಜ ಶೆಟ್ಟಿ, ಕೇಂದ್ರ ಸಹಕಾರಿ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಗೋಪಾಲಕೃಷ್ಣ ಭಟ್ ಮೊದಲಾದವರು ಉಪಸ್ಥಿತರಿದ್ದರು.
ಜಿಲ್ಲಾ ಸಹಕಾರಿ ಯೂನಿಯನ್ ಲಿ. ಮಂಗಳೂರು ಇದರ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೂಟ್ಟು ಅಥಿತಿಗಳನ್ನು ಸ್ವಾಗತಿಸಿದರು,ದ.ಕ ಜಿಲ್ಲಾ ಸಹಕಾರಿ ಯೂನಿಯನ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್. ವಿ. ಹಿರೇಮಠ ವಂದಿಸಿದರು.











