Close Menu
Navaloka Media News Mangalore| Kannada Online News PortalNavaloka Media News Mangalore| Kannada Online News Portal
    Our Picks

    ಮಂಗಳೂರು : ಕೆಎಂಸಿಯಲ್ಲಿ 70ನೇ ವರ್ಷದ ಗಣೇಶ ಚತುರ್ಥಿ ಸಂಭ್ರಮ

    September 11, 2026

    ಮಂಗಳೂರು: ಕ್ಯಾಂಪ್ಕೊ ದಾಖಲೆಯ ಸಾಧನೆ ; ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ

    September 10, 2026

    ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ

    September 10, 2026

    Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು : ಕೆಎಂಸಿಯಲ್ಲಿ 70ನೇ ವರ್ಷದ ಗಣೇಶ ಚತುರ್ಥಿ ಸಂಭ್ರಮ

    September 11, 2026

    ಮಂಗಳೂರು: ಕ್ಯಾಂಪ್ಕೊ ದಾಖಲೆಯ ಸಾಧನೆ ; ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ

    September 10, 2026

    ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ

    September 10, 2026
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    • Home
    • Local News
    • State News
    • National/International news
    • Film News
    • Contact Us
    Facebook X (Twitter) Instagram
    Navaloka Media News Mangalore| Kannada Online News PortalNavaloka Media News Mangalore| Kannada Online News Portal
    Home»Local News»ದೇರಳಕಟ್ಟೆಯಲ್ಲಿ ಎಂಸಿಸಿ ಬ್ಯಾಂಕಿನ 22ನೇ ಶಾಖೆ ಉದ್ಘಾಟನೆ
    Local News

    ದೇರಳಕಟ್ಟೆಯಲ್ಲಿ ಎಂಸಿಸಿ ಬ್ಯಾಂಕಿನ 22ನೇ ಶಾಖೆ ಉದ್ಘಾಟನೆ

    adminBy adminJuly 3, 2026
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email
    Navaloka media news
    Navaloka media news

    ಮಂಗಳೂರು, ಜು.03 : ಎಂಸಿಸಿ ಬ್ಯಾಂಕ್ ನ 22 ಶಾಖೆಯು ದೇರಳ ಕಟ್ಟೆಯಲ್ಲಿರುವ ಫಾದರ್ ಮುಲ್ಲರ್ ಕಟ್ಟಡದ ಸಂಕೀರ್ಣದಲ್ಲಿ ಜೂನ್ 28, ರವಿವಾರ ಉದ್ಘಾಟನೆಗೊಂಡಿತು.

    ನೂತನ ಶಾಖೆಯನ್ನು ಎಂಸಿಸಿ ಬ್ಯಾಂಕ್ನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಅವರು ಉದ್ಘಾಟಿಸಿದರು. ದೇರಳಕಟ್ಟೆಯ ಫಾ. ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ಆಡಳಿತಾಧಿಕಾರಿ ವಂ. ಫಾ. ನಿಲೇಶ್ ಕ್ರಾಸ್ತಾ ಅವರು ಎಟಿಎಂ ಅನ್ನು ಉದ್ಘಾಟಿಸಿ ಚಾಲನೆ ನೀಡಿದರು. ಉರ್ಸುಲಿನ್ ಫ್ರಾನ್ಸಿಸ್ಕನ್ ಸಿಸ್ಟರ್ಸ್ನ ಸುಪೀರಿಯರ್ ಜನರಲ್ ವಂ. ಸಿ. ಮಿಲ್ಲಿ ಫೆರ್ನಾಂಡಿಸ್ ಅವರು ಸೇಫ್ ರೂಂ ಅನ್ನು ಉದ್ಘಾಟಿಸಿದರು. ಫಾ. ಮುಲ್ಲರ್ ಹೋಮಿಯೋಪಥಿಕ್ ಫಾರ್ಮಾಸ್ಯುಟಿಕಲ್ ವಿಭಾಗದ (ಎಫ್ ಎಮ್ ಎಚ್ ಪಿಡಿ) ಆಡಳಿತಾಧಿಕಾರಿ ವಂ. ಫಾ. ನೆಲ್ಸನ್ ದೀರಜ್ ಪಾಯ್ಸ್ ಅವರು ಬ್ಯಾಂಕಿನ ಇ-ಸ್ಟಾಂಪ್ ಸೇವೆಗೆ ಚಾಲನೆ ನೀಡಿದರು. ಪಾಣೀರ್ನ ಅವರ್ ಲೇಡಿ ಆಫ್ ಮರ್ಸಿ ಚರ್ಚ್ನ ಧರ್ಮಗುರು ವಂ. ಫಾ. ವಿಕ್ಟರ್ ಡಿ‘ಮೆಲ್ಲೊ ಅವರು ನೂತನ ಶಾಖೆಗೆ ಆಶೀರ್ವಚನ ನೀಡಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದಅನಿಲ್ ಲೋಬೊ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಜನರ ವಿಶ್ವಾಸ ಮತ್ತು ಸಹಕಾರದಿಂದ ಎಂಸಿಸಿ ಬ್ಯಾಂಕ್ ನ ಈ ಶಾಖೆ ಯಶಸ್ಸು ಕಾಣಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು ಆರ್‌ಬಿಐ ಮಾರ್ಗಸೂಚಿಗಳ ಅನುಸಾರ ಕಾರ್ಯನಿರ್ವಹಿಸುತ್ತಿರುವ ಎಂಸಿಸಿ ಬ್ಯಾಂಕ್ ಗ್ರಾಹಕರ ಅಗತ್ಯಗಳಿಗೆ ಆದ್ಯತೆ ನೀಡುವ ಮೂಲಕ ಉತ್ತಮ ಹೆಸರು ಗಳಿಸಿದೆ ಎಂದು ಅವರು ಹೇಳಿದರು.

    ಪ್ರಸ್ತುತ ಆಡಳಿತದ ಅವಧಿಯಲ್ಲಿ ಐದು ಹೊಸ ಶಾಖೆಗಳನ್ನು ಆರಂಭಿಸಲಾಗಿದ್ದು, ಪ್ರತಿಯೊಂದು ಶಾಖೆಯೂ ಮೊದಲ ವರ್ಷದಲ್ಲೇ ₹10 ಕೋಟಿ ವ್ಯವಹಾರ ಸಾಧಿಸಿರುವುದು ಸಿಬ್ಬಂದಿಯ ಪರಿಶ್ರಮ ಮತ್ತು ಗ್ರಾಹಕರ ವಿಶ್ವಾಸದ ಫಲ ಎಂದು ಹೇಳಿದರು.

    ಪಾನೀರ್ ಅವರ್ ಲೇಡಿ ಆಫ್ ಮರ್ಸಿ ಚರ್ಚಿನ ಧರ್ಮಗುರು ಫಾ.ವಿಕ್ಟರ್ ಡಿಮೆಲ್ಲೊ ಅವರು ಮಾತಾಡಿ , ಬ್ಯಾಂಕಿನ ಯಶಸ್ಸು ಸಾರ್ವಜನಿಕರ ವಿಶ್ವಾಸದ ಫಲವಾಗಿದೆ. ಬ್ಯಾಂಕ್ ನ ಸಿಬ್ಬಂದಿ ಗ್ರಾಹಕರನ್ನು ಅವರ ಉಡುಪು ಅಥವಾ ಸಾಮಾಜಿಕ ಹಿನ್ನೆಲೆಯ ಆಧಾರದ ಮೇಲೆ ನಿರ್ಣಯಿಸದೆ, ಪ್ರತಿಯೊಬ್ಬರನ್ನೂ ಗೌರವದಿಂದ ಕಾಣಬೇಕು ಎಂದು ಸಲಹೆ ನೀಡಿದರು.

    ಮುಖ್ಯ ಅತಿಥಿ ವಂ. ಸಿಸ್ಟರ್ ಮಿಲ್ಲಿ ಫೆರ್ನಾಂಡಿಸ್, ರೆವ. ಫಾ. ನಿಲೇಶ್ ಕ್ರಾಸ್ತಾ, ದೇರಳಕಟ್ಟೆಯ ಫಾ. ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ಆಡಳಿತಾಧಿಕಾರಿ ವಂ. ಫಾ. ನಿಲೇಶ್ ಕ್ರಾಸ್ತಾ, ಕೋಟೆಕಾರ್ ಗ್ರಾಮ ಪಂಚಾಯತ್ ಅಧ್ಯಕ್ಷೆ ದಿವ್ಯಾ ಸತೀಶ್ ಶೆಟ್ಟಿ ಅವರು ಕಾರ್ಯಕ್ರಮದಲ್ಲಿ ಮಾತಾಡಿದರು.

    ಸಮುದಾಯ ಸೇವೆಯ ಅಂಗವಾಗಿ ಎಂಸಿಸಿ ಬ್ಯಾಂಕ್ ದೇರಳಕಟ್ಟೆ ಭಾಗದ ಶೈಕ್ಷಣಿಕ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಾದ ಫ್ರ್ಯಾಂಕಿ ಫ್ರಾನ್ಸಿಸ್ ಕುಟಿನ್ಹಾ, ಅಲ್ವಿನ್ ಜೆರೋಮ್ ಡಿ‘ಸೋಜಾ, ಫಯಾಝ್ ಮಡೂರು, ಸಿಎ ಮ್ಯಾಕ್ಸಿಮ್ ಫೆರ್ನಾಂಡಿಸ್, ಉಗ್ಗಪ್ಪ ಪೂಜಾರಿ ಹಾಗೂ ಶಫಿ ಬಬ್ಬುಕಟ್ಟೆ ಅವರನ್ನು ಸನ್ಮಾನಿಸಲಾಯಿತು. ಪ್ರತಿಭಾವಂತ ಎಸೆಸೆಲ್ಸಿ, ಪಿಯುಸಿ ವಿದ್ಯಾರ್ಥಿ ಗಳನ್ನು ಗೌರವಿಸಲಾಯಿತು. ವಿವಿಧ ಸಂಸ್ಥೆ ಗಳಿಗೆ ಬ್ಯಾಂಕ್ ವತಿಯಿಂದ ಆರ್ಥಿಕ ನೆರವು ವಿತರಿಸಲಾಯಿತು.

    ಬ್ಯಾಂಕ್ ವತಿಯಿಂದ ಉರ್ಸುಲಿನ್ ಸಿಸ್ಟರ್ಸ್ ವಿಶೇಷ ಚೇತನ ಮಕ್ಕಳ ಶಾಲೆಗೆ ₹1,00,000, ಪ್ರಿನ್ಸಿತಾ ಡಿ‘ಸೋಜಾ ಅವರ ವಿದ್ಯಾಭ್ಯಾಸಕ್ಕೆ ₹25,000, ಮರ್ಸಿ ಕೇರ್ ಚಾರಿಟೇಬಲ್ ಟ್ರಸ್ಟ್‌ಗೆ ₹50,000 ಹಾಗೂ ಓಲವಿನಹಳ್ಳಿ ಆಶ್ರಮಕ್ಕೆ ₹1,00,000 ಧನಸಹಾಯ ವಿತರಿಸಲಾಯಿತು.

    ಮುಖ್ಯ ಅತಿಥಿಯಾಗಿ ವಂ. ಸಿ. ಮಿಲ್ಲಿ ಫೆರ್ನಾಂಡಿಸ್ ಭಾಗವಹಿಸಿದ್ದರು. ಗೌರವ ಅತಿಥಿಗಳಾಗಿ ರೆವ. ಫಾ. ನಿಲೇಶ್ ಕ್ರಾಸ್ತಾ ಹಾಗೂ ಕೋಟೆಕಾರ್ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ದಿವ್ಯಾ ಸತೀಶ್ ಶೆಟ್ಟಿ ಉಪಸ್ಥಿತರಿದ್ದರು. ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿ‘ಸಿಲ್ವಾ ಹಾಗೂ ಮಹಾಪ್ರಬಂಧಕ ಸುನಿಲ್ ಮೆನೇಜಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ಈ ಸಂದರ್ಭದಲ್ಲಿ ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿ‘ಸಿಲ್ವಾ, ನಿರ್ದೇಶಕರಾದ ಆಂಡ್ರ್ಯೂ ಡಿ‘ಸೋಜಾ, ಡೇವಿಡ್ ಡಿ‘ಸೋಜಾ, ಮೆಲ್ವಿನ್ ವಾಸ್, ಅನಿಲ್ ಪತ್ರಾವೊ, ಜೆ.ಪಿ. ರೋಡ್ರಿಗಸ್, ಎಲ್ರಾಯ್ ಕಿರಣ್ ಕ್ರಾಸ್ತಾ, ಐರಿನ್ ರೆಬೆಲ್ಲೋ, ವಿನ್ಸೆಂಟ್ ಲಸ್ರಾದೊ, ಫೆಲಿಕ್ಸ್ ಡಿಕ್ರೂಜ್, ಸುಶಾಂತ್ ಸಲ್ಡಾನ್ಹಾ, ಅಲ್ವಿನ್ ಪಿ. ಮೊಂತೇರೊ ಹಾಗೂ ಮಹಾಪ್ರಬಂಧಕ ಸುನಿಲ್ ಮಿನೇಜಸ್ ಉಪಸ್ಥಿತರಿದ್ದರು.

    ನಿರ್ದೇಶಕ ರೋಶನ್ ಡಿಸೋಜ ಸ್ವಾಗತಿಸಿದರು. ಜುಲೆಟ್ ಡಿಸೋಜ ವಂದಿಸಿದರು. ಶೈನಿ ವಿಭಾ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.

     

     

    Navaloka media news
    Navaloka media news
    Share. Facebook Twitter Pinterest LinkedIn WhatsApp Reddit Tumblr Email
    admin
    • Website

    Related Posts

    Local News September 11, 2026

    ಮಂಗಳೂರು : ಕೆಎಂಸಿಯಲ್ಲಿ 70ನೇ ವರ್ಷದ ಗಣೇಶ ಚತುರ್ಥಿ ಸಂಭ್ರಮ

    Local News September 10, 2026

    ಮಂಗಳೂರು: ಕ್ಯಾಂಪ್ಕೊ ದಾಖಲೆಯ ಸಾಧನೆ ; ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ

    Local News September 10, 2026

    ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ

    Local News September 9, 2026

    ಮಂಗಳೂರು : ಶ್ರೀ ರಾಮ ಕೃಷ್ಣ ಮಠದಲ್ಲಿ ಕಲಾಸಾಧನ ವತಿಯಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’

    Local News September 8, 2026

    ಸೆ.14 -16 : ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

    Local News September 7, 2026

    ಮಂಗಳೂರು : ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಆವರಣದಲ್ಲಿ ಶ್ರೀಕೃಷ್ಣ ವೇಷ ಸ್ಪರ್ಧೆ

    Comments are closed.

    Demo
    Don't Miss
    Local News September 11, 2026

    ಮಂಗಳೂರು : ಕೆಎಂಸಿಯಲ್ಲಿ 70ನೇ ವರ್ಷದ ಗಣೇಶ ಚತುರ್ಥಿ ಸಂಭ್ರಮ

    ಮಂಗಳೂರು, ಸೆ.11 : ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ 70ನೇ ವರ್ಷದ ಗಣೇಶ ಚತುರ್ಥಿ ಉತ್ಸವವನ್ನುಲೈಟ್‌ಹೌಸ್ ಹಿಲ್ ರೋಡ್ ಕ್ಯಾಂಪಸ್‌ನಲ್ಲಿ…

    ಮಂಗಳೂರು: ಕ್ಯಾಂಪ್ಕೊ ದಾಖಲೆಯ ಸಾಧನೆ ; ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ

    September 10, 2026

    ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ

    September 10, 2026

    ಮಂಗಳೂರು : ಶ್ರೀ ರಾಮ ಕೃಷ್ಣ ಮಠದಲ್ಲಿ ಕಲಾಸಾಧನ ವತಿಯಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’

    September 9, 2026
    Stay In Touch
    • Facebook
    • Twitter
    • Pinterest
    • Instagram
    Facebook X (Twitter) Instagram Pinterest
    • Home
    • Local News
    • State News
    • National/International news
    • Film News
    • Contact Us
    © 2026 All Right Reserved. Designed by Blueline Computers.

    Type above and press Enter to search. Press Esc to cancel.