ಮಂಗಳೂರು, ಜು.04 : ಸ್ಕೂಟರ್ ಮೇಲೆ ಕಂಟೈನರ್ ಲಾರಿ ಹರಿದು ಸ್ಕೂಟರ್ ಸವಾರ ಸಾವಿಗೀಡಾದ ಘಟನೆ ಕೂಳೂರು
ರಾಷ್ಟ್ರೀಯ ಹೆದ್ದಾರಿ 66ರ ವಿ.ಅರ್.ಎಲ್ ಕಚೇರಿ ಎದುರು ಶುಕ್ರವಾರ ಸಂಜೆ ನಡೆದಿದೆ.
ಮೃತರನ್ನು ಸದಾನಂದ ಶೆಟ್ಟಿಗಾರ್(46) ಎಂದು ಗುರುತಿಸಲಾಗಿದೆ.
ಸದಾನಂದ ಶೆಟ್ಟಿಗಾರ್ ಕೊಟ್ಟಾರ ಕಡೆಯಿಂದ ಸುರತ್ಕಲ್ ಕಡೆಗೆ ಹೋಗುತ್ತಿದ್ದ ವೇಳೆ ಅದೇ ರಸ್ತೆಯಲ್ಲಿ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸದಾನಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.











