ಮೈಸೂರು,ಜು. 12 : ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರು ಶನಿವಾರ ರಾತ್ರಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಎಸ್ ಜಾನಕಿ ಅವರಿಗೆ 88 ವರ್ಷ ವಯಸ್ಸಾಗಿತ್ತು.
ಎಸ್.ಜಾನಕಿ ಅವರು ಶುಕ್ರವಾರ ತಡರಾತ್ರಿ ಉಸಿರಾಟದ ತೊಂದರೆಗೊಳಗಾದ ಅವರನ್ನು ಶನಿವಾರ ಬೆಳಗಿನ ಜಾವ ಮೈಸೂರಿನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಶನಿವಾರ ರಾತ್ರಿ 7:45 ರ ಸಮಯದಲ್ಲಿ ನಿಧನರಾಗಿದ್ದಾರೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.
ಎಸ್.ಜಾನಕಿ ಅವರು ಚಲನಚಿತ್ರ ಹಿನ್ನೆಲೆ ಗಾಯಕಿ. ಅವರು ತಮಿಳು, ತೆಲುಗು, ಕನ್ನಡ, ಮಲಯಾಳಂ, ಒಡಿಯಾ, ಹಿಂದಿ, ತುಳು, ಬಂಗಾಳಿ, ಪಂಜಾಬಿ, ಕೊಂಕಣಿ, ಮರಾಠಿ ಮುಂತಾದ ಭಾಷೆಗಳಲ್ಲಿ ಹಾಡುಗಳನ್ನು ಹಾಡಿದ್ದಾರೆ.











