ಬಜ್ಪೆ, ಜು. 28 :: ಬಸ್ ಮತ್ತು ಬೈಕ್ ಮುಖಾ-ಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಎಕ್ಕಾರು ಬಳಿ ಸೋಮವಾರ ಸಂಜೆ ನಡೆದಿದೆ.
ಮೃತರನ್ನು ಬಜ್ಪೆ ನಿವಾಸಿ ಮಹಮ್ಮದ್ ಬಶೀರ್ ಕಿನ್ನಿಗೋಳಿ (45) ಎಂದು ಗುರುತಿಸಲಾಗಿದೆ.
ಕಟೀಲು ಕಡೆಯಿಂದ ಮಂಗಳೂರಿಗೆ ಸಾಗುತ್ತಿದ್ದ ಬಸ್ ಹಾಗೂ ಬಜಪೆ ಕಡೆಯಿಂದ ಬರುತ್ತಿದ್ದ ಬೈಕ್ ನಡುವೆ ಎಕ್ಕಾರು ಬೋಲೋಡಿ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬಶೀರ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿರುವ ಅವರ ಪತ್ನಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಬಜೈ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











